ಶಿವಕುಮಾರ್‌ಗೆ ಬಸವ ಸೇವಾ ಪ್ರಶಸ್ತಿ

ಕೋಲಾರ,ಏ.೧೭: ಕರ್ನಾಟಕ ಸೋಷಿಯಲ್ ಕ್ಲಬ್ ಹುಬ್ಬಳ್ಳಿ ಹಾಗೂ ಬಸವ ಬಳಗ ಹುಬ್ಬಳ್ಳಿ ಇವರ ಸಹಯೋಗದಲ್ಲಿ,ಪ್ರತಿವರ್ಷ ಬಸವ ಜಯಂತಿಯ ನಿಮಿತ್ತವಾಗಿ ಕೊಡುವ ಪ್ರತಿಷ್ಠಿತ “ಬಸವ ಸೇವಾ ಪ್ರಶಸ್ತಿ” ಗೆ ಕೋಲಾರ ನಗರದ ಶಿಕ್ಷಕ, ಕವಿ, ಸಂಘಟಕ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಶಿವಕುಮಾರ್ ರವರು ಆಯ್ಕೆಯಾಗಿದ್ದಾರೆ.
ಸಮಾಜ ಸೇವೆ, ಶಿಕ್ಷಣ ಹಾಗೂ ಸಾಹಿತ್ಯ, ಸಂಘಟನೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರಧಾನ ಸಮಾರಂಭವು ೧೬ ಮೇ ೨೦೨೧ ರಂದು ಹುಬ್ಬಳ್ಳಿಯಲ್ಲಿ ಜರುಗಲಿದೆ ಎಂದು ಕರ್ನಾಟಕ ಸೋಷಿಯಲ್ ಕ್ಲಬ್ ಅಧ್ಯಕ್ಷರಾದ ಚಂದ್ರಶೇಖರ ಮಾಡಲಗೇರಿ ತಿಳಿಸಿದರು.