ಶಿವಣ್ಣನ ಗಮನ ಸೆಳೆದ ಗಮನಂ

ಬಹುಭಾಷಾ ನಟಿ ಶ್ರೀಯಾ ಶರಣ್ ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಸಾಹಸಕ್ಕೆ ಹ್ಯಾಟ್ರಿಕ್​ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್​ ಸಾಥ್​ ನೀಡಿದ್ದಾರೆ.
ಬಹುಭಾಷೆಯಲ್ಲಿ ಸಿದ್ಧವಾಗಿರುವ ಗಮನಂ ಚಿತ್ರದ ಕನ್ನಡದ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಶಿವಣ್ಣ ಶುಭ ಹಾರೈಸಿದ್ದಾರೆ.
ಸುಜನಾ ರಾವ್, ಚಿತ್ರದ ನಿರ್ದೇಶಕಿ.ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಸೇರಿ ಒಟ್ಟು ಐದು ಭಾಷೆಗಳಲ್ಲಿ ಗಮನಂ ತಯಾರಾಗಿದ್ದು, ಚಿತ್ರವನ್ನು ರಮೇಶ್ ಕರುತೂರಿ ಮತ್ತು ವೆಂಕಿ ಪುಶದಾಪು ಮತ್ತು ಜ್ಞಾನಶೇಖರ್ ವಿ.ಎಸ್ ನಿರ್ಮಾಣ ಮಾಡಿದ್ದಾರೆ.
ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ಪವನ್​ ಕಲ್ಯಾಣ್​, ತಮಿಳಿನಲ್ಲಿ ಜಯಂ ರವಿ, ಮಲಯಾಳಂನಲ್ಲಿ ಫಹಾದ್ ಫಾಸಿಲ್​ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ಬಹುತಾರಾಗಣದ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ಕಲಾವಿದರಿದ್ದಾರೆ. ಹಿರಿಯ ನಟ ಚಾರು ಹಾಸನ್, ಶ್ರಿಯಾ ಸರಣ್, ಪ್ರಿಯಾಂಕಾ ಜವಾಲ್ಕರ್, ಶಿವ ಕಂದುಕುರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಂಜಯ್ ಸ್ವರೂಪ್, ಇಂದೂ ಆನಂದ್, ಪ್ರಿಯಾ, ಸುಹಾಸ್, ಮಾಸ್ಟರ್ ನೇಹಾಂತ್, ಬಿತಿರಿ ಸತ್ತಿ, ರವಿಪ್ರಕಾಶ್ ಮುಂತಾದ ಕಲಾವಿದರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಗಾಯಕಿಯಾಗಿ ನಿತ್ಯಾ ಮೆನನ್ ಕಾಣಿಸಿಕೊಂಡಿದ್ದಾರೆ.
ಶಿವಣ್ಣ ಅವರಂತೂ ಚಿತ್ರ ಟ್ರೈಲರ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇಳಯರಾಜಾ ಸಂಗೀತ, ಜ್ಞಾನಶೇಖರ್ ವಿ.ಎಸ್.ಛಾಯಾಗ್ರಹಣ ವಿದೆ.