ಶಿವಮೊಗ್ಗದಲ್ಲಿ ಬಿಜೆಪಿ ಜನ ಸೇವಕ ಸಮಾವೇಶಕ್ಕೆ ಚಾಲನೆ ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಶಿವಮೊಗ್ಗ, ಜ.13: ನಗರದ ಪೆಸೆಟ್ ಕಾಲೇಜ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಪಕ್ಷವು ಜನಸೇವಕ ಸಮಾವೇಶ ಆಯೋಜಿಸಿತ್ತು. ಸಮಾವೇಶದಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಶಿವಮೊಗ್ಗ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ‘ಪಕ್ಷದ ಹಿರಿಯರ ಶ್ರಮದಿಂದ ಶಿವಮೊಗ್ಗ ಜಿಲ್ಲೆಯು ಬಿಜೆಪಿಯ ಭದ್ರ ಕೋಟೆಯಾಗಿದೆ’ ಎಂದು  ತಿಳಿಸಿದರು.ಸ್ವಜನ ಪಕ್ಷಪಾತದಿಂದ ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಹಾಕಿಕೊಟ್ಟ ನೆಲೆ, ಮೋದಿಯವರ ಜನಪರ ಯೋಜನೆಯಿಂದ ಬಿಜೆಪಿ ಪಕ್ಷ ದೊಡ್ಡ ಹೆಮ್ಮರವಾಗಿ ಬೆಳೆದಿದೆ ಎಂದರು.ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಕಾಂಗ್ರೆಸ್ ನಮ್ಮನ್ನು ರಾಜಕೀಯವಾಗಿ ತುಳಿಯಲು ಯತ್ನಿಸಿತು. ಆದರೆ ಇಂದು ರಾಮಮಂದಿರದ ವಿಚಾರದಲ್ಲಿ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಮಂದಿರ ನಿರ್ಮಾಣಕ್ಕೆ ಚಾಲನೆ ದೊರಕಿದೆ ಎಂದರು.ವೈಯುಕ್ತಿಕ ಶೌಚಾಲಯ, ಉಜ್ವಲ ಯೋಜನೆ, ಜನಧನ್ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. 15 ನೇ ಹಣಕಾಸು ಯೋಜನೆಯಲ್ಲಿ ಜನಸಂಖ್ಯೆ ಆಧಾರದ ಮೇರೆಗೆ ಒಂದೊಂದು ಗ್ರಾಪಂಗೆ ತಲಾ ಒಂದು ಕೋಟಿ ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ  ಕಾಂಗ್ರೆಸ್ ಮುಕ್ತ ಮಾಡುವ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.ಸಮಾರಂಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮುಖಂಡರಾದ ಸಿ.ಟಿ.ರವಿ ಸೇರಿದಂತೆ ಮೊದಲಾದವರಿದ್ದರು.