ಶಿವಮೊಗ್ಗದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ

ಶಿವಮೊಗ್ಗ, ಜು. ೨೫- ಶಿವಮೊಗ್ಗ ನಗರದ ಕಸ್ತೂರ ಬಾ ಕಾಲೇಜ್ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತಾಧ್ಯಪಕ ಸಂಘ ಆಯೋಜಿಸಿದ್ದ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು. ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿ, ಸಂಸ್ಕೃತ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದೆ. ಸಂಸ್ಕೃತಿ ಕಲಿಸುವ ಭಾಷೆಯಾಗಿದೆ ಎಂದರು.
ಸಂಸ್ಕೃತ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಕೆ ಸ್ಥಗಿತವಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಈ ಕುರಿತಂತೆ ತಾವು ಸರ್ಕಾರದ ಜೊತೆ ಚರ್ಚಿಸಿ ವಿದ್ಯಾರ್ಥಿ ವೇತನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಇದೇ ವೇಳೆ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.