ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿಯ ಶ್ರೀ ಮಾರುತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಸ್.ರುದ್ರಮುನಿಯವರಿಗೆ ಶಿಕ್ಷಕರ ವೃಂದ ಮತ್ತು ಹಳೇ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಸಮಾರಂಭದಲ್ಲಿ  ಜನಸ್ಪಂದನ ಟ್ರಸ್ಟ್ ಅಧ್ಯಕ್ಷರಾದ ಚನ್ನಬಸಪ್ಪ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.