ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ

ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜು. 17: ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಿಲಕ್
ನಗರ ಹಾಗೂ ಭದ್ರಾವತಿ ಪಟ್ಟಣದ ನ್ಯೂ ಟೌನ್ ಠಾಣಾ ವ್ಯಾಪ್ತಿಯ ಕೂಲಿ ಬ್ಲಾಕ್ ಶೆಡ್
ಏರಿಯಾದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
ಶಿವಮೊಗ್ಗ ಜಯನಗರ  ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ನವೀನ್ ಹಾಗೂ ಭದ್ರಾವತಿ ನ್ಯೂ
ಟೌನ್ ಠಾಣೆ ಸಬ್ ಇನ್ಸ್’ಪೆಕ್ಟರ್ ಭಾರತೀರವರ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.
ಠಾಣೆಯ ಇತರೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಪರೇಡ್ ನಲ್ಲಿ ಭಾಗವಹಿಸಿದ್ದರು.
ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ, ನಿಯಮಿತವಾಗಿ
ಆಯಾ ಠಾಣೆಯ ಪೊಲೀಸರು ಪಥ ಸಂಚಲನ ನಡೆಸುತ್ತಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ
ಜಿ.ಕೆ.ಮಿಥುನ್ ಕುಮಾರ್ ಎಸ್ಪಿಯಾಗಿ ಆಗಮಿಸಿದ ನಂತರ ಈ ಹೊಸ ವ್ಯವಸ್ಥೆ
ಜಾರಿಗೊಳಿಸಿದ್ದಾರೆ.