
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಸೆ. ೧೦; ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನುಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗದ ಮೇಲಿನ ತುಂಗಾನಗರದ ನಿವಾಸಿ ಕುಮಾರ್ ಕೆ (36) ಹಾಗೂ ಅಣ್ಣಾನಗರದ ನಿವಾಸಿ ಜಯಣ್ಣ (40) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.ಇವರಿಂದ 1.7 ಲಕ್ಷ ರೂ. ಮೌಲ್ಯದ ತಲಾ 26 ಕೆಜಿ ತೂಕದ 77 ಚೀಲ ಅಕ್ಕಿ ಪ್ಯಾಕೇಟ್ ಹಾಗೂಕೃತ್ಯಕ್ಕೆ ಉಪಯೋಗಿಸಿದ್ದ ಪ್ಯಾಸೆಂಜರ್ ಆಟೋವನ್ನು ಪೊಲೀಶರು ವಶಕ್ಕೆಪಡೆದುಕೊಂಡಿದ್ದಾರೆ.ಸೆ. 4 ರಂದು ಎಪಿಎಂಸಿಯಲ್ಲಿರುವ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿದ್ದ ಅಕ್ಕಿ ಪ್ಯಾಕೇಟ್ ಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮಳಿಗೆಮಾಲೀಕರು ವಿನೋಬನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಬಿ.ಸಿ.ಸುನೀಲ್, ಸಿಬ್ಬಂದಿಗಳಾದ ಸಿಪಿಸಿ ರಾಜು, ಚಂದ್ರಾನಾಯ್ಕ್, ಮಲ್ಲಪ್ಪ ಮತ್ತು ಅರುಣ್ ಕುಮಾರ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.