ಶಿವಮೊಗ್ಗ : ಸಕ್ಕರೆ ಕಾರ್ಖಾನೆ ಭೂ ಹಕ್ಕಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

 ಸಂಜೆವಾಣಿ ವಾರ್ತೆ

ಶಿವಮೊಗ್ಗ, ಮಾ.೧: ಶಿವಮೊಗ್ಗ ತಾಲೂಕಿನ ಸಕ್ಕರೆ ಕಾರ್ಖಾನೆ ರೈತರು ಮತ್ತು ಕಾರ್ಮಿಕರ, ನಿವಾಸಿಗಳ ಭೂ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಫೆ. 29 ರ ಗುರುವಾರ ಸಾವಿರಾರು ಗ್ರಾಮಸ್ಥರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.ಮಲವಗೊಪ್ಪದ ಚನ್ನಬಸವೇಶ್ವರ ದೇವಾಲಯ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಸುಮಾರು 10 ಕಿ.ಮೀ. ದೂರ ಕ್ರಮಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಅಂತ್ಯಗೊಂಡಿತು.ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಾಗೂ ವಾಸಿಸುತ್ತಿರುವ ಮನೆಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.ಪ್ರತಿಭಟನೆಯಲ್ಲಿ ಮಲವಗೊಪ್ಪ, ತೊಪ್ಪಿನಘಟ್ಟ, ಹರಿಗೆ, ನಿದಿಗೆ, ಸದಾಶಿವನಗರ ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮರಡಿ, ಹರಪನಹಳ್ಳಿ ಕ್ಯಾಂಪ್, ಹಾರೋಬೆನವಳ್ಳಿ ತಾಂಡ, ತರಗನಹಳ್ಳಿ, ಪಿಳ್ಳಂಗೆರೆ, ಬಿ. ಬೀರನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹೊಸಮನೆ ತಾಂಡಾ, ಯರಗನಾಳ್ ಸೇರಿದಂತೆಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.