ಶಿವಮೊಗ್ಗ : ಹಾಡಹಗಲೇ ಪೊಲೀಸ್ ಠಾಣೆ ಸಮೀಪದಲ್ಲೇ ರೌಡಿಯ ಬರ್ಬರ ಹತ್ಯೆ!

ಶಿವಮೊಗ್ಗ, ಜು. 14: ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿನೋಬನಗರದ ಪೊಲೀಸ್ ಚೌಕಿ ವೃತ್ತದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ವಿನೋಬನಗರ ಪೊಲೀಸ್ ಠಾಣೆಯಿಂದ ಕೊಂಚ ದೂರದಲ್ಲಿಯೇ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಾಹನವೊಂದರಲ್ಲಿ ಆಗಮಿಸಿದ ನಾಲ್ಕೈದು ಜನರ ಗುಂಪು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.ತೀವ್ರ ರಕ್ತಸ್ರಾವದಿಂದ ಹಂದಿ ಅಣ್ಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ನೂರಾರು ಜನರು ಬೀಡುಬಿಟ್ಟಿದ್ದರು. ರೌಡಿ ಶೀಟರ್ ಹಂದಿ ಅಣ್ಣಿ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ

Attachments area