ಶಿವಯೋಗಿಗಳ ಆಚಾರ ವಿಚಾರಗಳನ್ನು ಮೈಗೂಡಿಸಿಕೊಳ್ಳಿ- ಎಡಿಸಿ

ರಾಯಚೂರು, ಆ.೦೧ಮಹಾಂತ ಶಿವಯೋಗಿ ಸ್ವಾಮಿ ಗಳ ಆಚಾರ ವಿಚಾರಗಳನ್ನು ಎಲ್ಲರೂ ಮೈಗೂಡಿಸಿಕೊಂಡು
ಸಮಾಜ ತಿದ್ದುವ ಕೆಲಸ ಮಾಡಬೇಕೆಂದು ಅಪಾರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ. ಆರ್ ಅವರು ಹೇಳಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮ.ನಿ.ಪ್ರ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಚಾರಣೆ ಮಾಡಿ ಮಾತನಾಡುತ್ತಾ, ಮಹಾಂತ ಶಿವಯೋಗಿಗಳು ಸಮಾಜವನ್ನು ತಿದ್ದುವ ನಿಟ್ಟಿನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಹೆಚ್ಚಾಗಿ ಮಾದಕ ದ್ರವ ವಸ್ತುಗಳಿಗೆ ಬಲಿಯಾಗಿದ್ದಾರೆ.ಅವರನ್ನು ವ್ಯಸನ ಮುಕ್ತರನ್ನಾಗಿ ಮಾಡಲು ಪಣ ತೊಟ್ಟಿದ್ದರು ಎಂದರು. ಮಾದಕ ವಸ್ತು ಸಮಾಜದ ಒಂದು ಪಿಡುಗು ಸುಂದರ ಸಮಾಜವನ್ನು ನಿರ್ಮಾಣ ಮಾಡಲು ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ವ್ಯಸನ ಮುಕ್ತರಾಗಬೇಕು ಎಂದರು.
ರಿಮ್ಸ್ ಆಸ್ಪತ್ರೆ ಮಾನಸಿಕ ತಜ್ಞ ಅನಿಲ್ ಕುಮಾರ್ ಅವರು ಮಾತನಾಡಿ, ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು, ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು.ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ಗುರುತರ ನಾಗರಿಕ ಸಮಾಜದ ಕರ್ತವ್ಯ ಎಂದು ಸಲಹೆ ನೀಡಿದರು.
ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಮಾದಕ ವಸ್ತುಗಳಿಂದ ಮನುಷ್ಯನ ಅಂಗಾಂಗಳಿಗೆ ತಲುಪಿ ಮನಷ್ಯ ಅದಕ್ಕೆ ಮದ್ಯಪಾನಕ್ಕೆ ದಾಸನು ಆಗುತ್ತಾನೆ ಎಂದರು.
ಮದ್ಯಪಾನ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ಖಿನ್ನತೆಗೆ ಕಾರಣವಾಗಬಹುದು ಹೀಗಾಗಿ ಸಮೂಹ ಸನ್ನಡತೆ ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಂದ್ರ ಬಾಬು, ಅಬಕಾರಿ ಇಲಾಖೆ ಅಧಿಕಾರಿ ಮಹಾಂತೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಮಂಗಳ ನಾಯಕ್ಜಿ ಲ್ಲಾ ಮತ್ತು ತಾಲೂಕು ಮಟ್ಟ ಶಿಕ್ಷಕರು ಸೇರಿದಂತೆ ಇದ್ದರು.