ಶಿವರಂಜನ್ ಸತ್ಯಂಪೇಟೆಯವರಿಗೆ ಪಿಎಚ್‍ಡಿ ಪದವಿ

ಕಲಬುರಗಿ.ಡಿ.24: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿ ಶಿವರಂಜನ್ ಸತ್ಯಂಪೇಟೆ ಅವರಿಗೆ ವಿಶ್ವವಿದ್ಯಾಲಯವು ಪಿಎಚ್‍ಡಿ ಪದವಿಯನ್ನು ನೀಡಿz ಎಂದು ಕುಲಸಚಿವ (ಮೌಲ್ಯಮಾಪನ) ಸಂಜೀವಕುಮಾರ್ ಕೆ.ಎಂ. ಅವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ವೀರಣ್ಣ ದಂಡೆ ಅವರ ಮಾರ್ಗದರ್ಶನದಲ್ಲಿ ಶರಣರ ಕುರಿತ ಕನ್ನಡ ನಾಟಕಗಳು ಕುರಿತು ಬರೆದು ಸಾದರ ಪಡಿಸಿದ ಮಹಾ ಸಂಶೋಧನಾ ಪ್ರಬಂಧಕ್ಕೆ ಪಿಎಚ್‍ಡಿ ಪದವಿಯನ್ನು ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ. ಶಿವರಂಜನ್ ಸತ್ಯಂಪೇಟೆ ಅವರಿಗೆ ಪಿಎಚ್‍ಡಿ ಪದವಿ ಲಭಿಸಿರುವುದಕ್ಕೆ ವಿವಿಧ ಕ್ಷೇತ್ರಗಳ ಗಣ್ಯ, ಮಾನ್ಯರು ಸಂತೋಷವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.