ಶಿವರಾಜ್‌ಕುಮಾರ್ ಪ್ರಚಾರಕ್ಕೆ ಅಭ್ಯಂತರವಿಲ್ಲ

ಹುಬ್ಬಳ್ಳಿ, ಮೇ ೬- ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ ತಮ್ಮ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ನಟರು ಯಾವುದೇ ಪಕ್ಷದ ಪರವಾಗಿ ಪ್ರಚಾರ ನಡೆಸಬಹುದು. ಪ್ರತಾಪ ಸಿಂಹ ಅವರು ನಟ ಶಿವರಾಜ್‌ಕುಮಾರ್ ಬಗ್ಗೆ ಮಾಡಿರುವ ಟೀಕೆ ಅವರಿಗೆ ಬಿಟ್ಟ ವಿಚಾರ ಎಂದರು.
ಲಿಂಗಾಯತ ಮತಗಳು ನಮಗೆ ಬೇಡ ಎಂಬುದಾಗಿ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ದೂರು ದಾಖಲಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಸೋನಿಯಾ ಗಾಂಧಿ ಬರುತ್ತಿರುವುದು ವೈಯಕ್ತಿಕ ವಿಷಯ ಇಂದು ಮೋದಿಯವರು ಹಾವೇರಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಈಗ ಮೊದಲಿಗಿಂತಲೂ ಮೋದಿ ಅಲೆ ಹೆಚ್ಚಾಗಿದೆ ಎಂದು ಬೊಮ್ಮಾಯಿ ಹೇಳಿದರು.