ಶಿವರಾಮ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಕಂಬನಿ

ಬೆಂಗಳೂರು,ಡಿ.4-ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

ಚಿತ್ರರಂಗದ ದಂತಕಥೆ:

ಕನ್ನಡ ಚಲನಚಿತ್ರರಂಗದ ಹಿರಿಯ ನಟ ಶ ಶಿವರಾಂ ಅವರ ನಿಧನದಿಂದ ಚಂದನವನ ಮತ್ತೊಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡು ಅನಾಥವಾಗಿದೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಂಬನಿ ಮಿಡಿದಿದ್ದಾರೆ

ಕನ್ನಡ ಚಲನಚಿತ್ರರಂಗದ ಹಿರಿಯಣ್ಣನಂತಿದ್ದ ಶಿವರಾಂ ಅವರು ಪುಟ್ಟಣ್ಣ ಕಣಗಾಲ್ ಅವರ ನಿರ್ದೇಶನದಿಂದ ಹಿಡಿದು ಇತ್ತೀಚಿನ ತಲೆಮಾರಿನ ನಿರ್ದೇಶಕರ ಚಿತ್ರಗಳಲ್ಲಿಯೂ ನಟಿಸಿ ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದರು. ಶರಪಂಜರ, ನಾಗರಹಾವು ಮೊದಲಾದ ಚಿತ್ರಗಳಲ್ಲಿ ಅಮೋಘವಾಗಿ ನಟಿಸಿ ತಮ್ಮ ನಟನಾ ಕೌಶಲ್ಯ ತೋರಿಸಿದ್ದ ಶಿವರಾಂ ಅವರು ತಮ್ಮ ಇಳಿವಯಸ್ಸಿನಲ್ಲೂ ಪಾದರಸದಂತೆ ಕೆಲಸ ಮಾಡುತ್ತಿದ್ದರು. ಇವರ ನಿಧನದಿಂದ ನನ್ನ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದಿದ್ದಾರೆ.

ಶಿವರಾಂ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದ್ದಾರೆ.

ನೋವಿನ ಸಂಗತಿ

ಕಳೆದ ನಾಲ್ಕು ದಿನಗಳಿಂದ ಜೀವನ್ಮರಣ ಹೋರಾಟದ ಬಳಿಕ ಇಹಲೋಕ ತ್ಯಜಿಸಿದ್ದಾರೆ ಇದು ನೋವಿನ ಸಂಗತಿ ಎಂದು ಹಿರಿಯ ಕಲಾವಿದರು ಇದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದರು. ದೊಡ್ಡ ಕಲಾವಿದರಾಗಿ ನಿರ್ದೇಶಕರು ನಿರ್ಮಾಪಕರಾಗಿ ಗಮನಸೆಳೆದಿದ್ದರು. ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಶಿವರಾಮ ಅವರ ನಿಧನ ಹಿರಿತೆರೆ ಮತ್ತು ಕಿರಿಕಿರಿಗೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಗುಣಗಾನ ಮಾಡಿದ್ದಾರೆ.

ಎಲ್ಲರೊಂದಿಗೂ ಬೆರೆಯುತ್ತಿದ್ದರು

ಹಿರಿಯ ಕಲಾವಿದ ಶಿವರಾಮಣ್ಣ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಅವರು ಎಲ್ಲರೊಂದಿಗೂ ಬರೆಯುತ್ತಿದ್ದರು ಎಂದು ಮತ್ತೊಬ್ಬ ಹಿರಿಯ ಕಲಾವಿದ ಎಸ್ .ಉಮೇಶ್ ತಿಳಿಸಿದ್ದಾರೆ.

ಹಲವು ಚಿತ್ರಗಳಲ್ಲಿ ಅವರೊಂದಿಗೆ ಒಡನಾಟ ಹೊಂದಿದ್ದ ಅವರ ನಿಧನ ತುಂಬಾ ಕಷ್ಟವಾಗಿದೆ ಎಂದು ಹೇಳಿದ್ದಾರೆ.