
ಯಾದಗಿರಿ : ಮೇ 10 : ಮಹಾಸಾಧ್ವಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಯುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಇವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸುಖಿ ಕುಟುಂಬಿಗಳಾದಾಗ ಮಾತ್ರ ಜಯಂತಿ ಅರ್ಥಪೂರ್ಣವಾಗುತ್ತದೆ.ಪೂಜ್ಯನೀಯ ಸ್ಥಾನವನ್ನು ಹೊಂದಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಮಾರ್ಗದರ್ಶಕಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಬಿಸಿಎಂ ಇಲಾಖೆ ಮ್ಯಾನೇಜರ್ ಸಾಬಯ್ಯ ಕಲಾಲ್, ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ರಂಗಪ್ಪ, ಸಾಂಖ್ಯಿಕ ಇಲಾಖೆ ಸಹಾಯಕ ಅಧಿಕಾರಿ ನಾಗರಾಜ ನಾಗೂರ, ಆಹಾರ ಇಲಾಖೆ ಸಿಬ್ಬಂದಿ ಕ್ರಿಷ್ಣಪ್ಪನಾಯಕ, ಜಿಲ್ಲಾ ಪಂಚಾಯತ ಕಾರ್ಯಾಲಯದ ಸಿಬ್ಬಂದಿ ಬಸಲಿಂಗಪ್ಪ ಕಿಲ್ಲನಕೇರಾ, ಕಾರ್ಮಿಕ ಇಲಾಖೆ ಸಿಬ್ಬಂದಿ ಭಗತ್ ವಾಡೇಕರ್, ವಯಸ್ಕರ ಶಿಕ್ಷಣ ಇಲಾಖೆ ಸಿಬ್ಬಂದಿ ವೀಣಾಶ್ರೀ, ಮೀನುಗಾರಿಕೆ ಇಲಾಖೆ ಸಿಬ್ಬಂದಿ ಸರಸ್ವತಿ,ಸೇರಿದಂತೆ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.