ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವದ ಭವ್ಯ ಮೆರವಣಿಗೆ ಗಮನ ಸೆಳೆದ ವಿವಿಧ ಕಲಾತಂಡಗಳ ಪ್ರದರ್ಶನ


ಬಳ್ಳಾರಿ,ಜು.04 : ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಬೆಳಗ್ಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು.
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಅವರು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆÉ ಮಾಡಿ, ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಭವ್ಯ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ ಕಳಸ-ಕುಂಭ ಹೊತ್ತ ಮಹಿಳೆಯರು ಗಮನ ಸೆಳೆದರು.
ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವದ ಭವ್ಯ ಮೆರವಣಿಗೆಯು ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭವಾಗಿ ರೈಲ್ವೆ ನಿಲ್ದಾಣದ ಮಾರ್ಗದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಆರ್.ಸುರೇಶ್ ಬಾಬು ಸೇರಿದಂತೆ ಹಡಪದ ಸಮುದಾಯದ ಮುಖಂಡರು ಇದ್ದರು.

One attachment • Scanned by Gmail