ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ


ಸಂಜೆವಾಣಿ ವಾರ್ತೆ
ಕುರುಗೋಡು:ಜು.03: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಗ್ರೇಡ್ -2 ತಹಶೀಲ್ದಾರ್ ಮಲ್ಲೇಶಪ್ಪ ಅವರು ಪುಷ್ಪ ನಮನ, ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ  ಗ್ರೇಡ್ -2 ತಹಶೀಲ್ದಾರ್ ಮಲ್ಲೇಶಪ್ಪ, ಕಚೇರಿ ಸಿಬ್ಬಂದಿಗಳು ಮತ್ತು ಹಡಪದ ಸಮಾಜದ ಮುಖಂಡರು, ಯುವಕರು ಉಪಸ್ಥಿತರಿದ್ದರು.