ಶಿವಾನಂದ ತಗಡೂರನ್ನು ಅಭಿನಂದಿಸಿದ ಟಿಹೆಚ್ ಎಂ ಬಸವರಾಜ್


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.28: ನಗರದ ಪತ್ರಿಕಾ ಭವನದಲ್ಲಿ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಕರ್ನಾಟಕ ಇತಿಹಾಸ ಅಕಾಡೆಮಿಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಹೆಚ್.ಎಂ.ಬಸವರಾಜ್ ಅವರು  ತಗಡೂರು ಅವರು ಸಂಘಟನೆಯಲ್ಲಿನ ಅವಿಸರಣೀಯ ಸೇವೆಯನ್ನು ಪರಿಗಣಿಸಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಹಿರಿಯ ಪತ್ರಕರ್ತ ಕಂ.ಕ.ಮೂರ್ತಿ,  ನಿರೂಪಕ ಗೌರೀಶ್ ಅಕ್ಕಿ ಮೊದಲಾದವರು ಇದ್ದರು.