ಶಿವಾನಂದ ತಗಡೂರುಗೆ ರಾಷ್ಟ್ರೀಯ ಪ್ರಶಸ್ತಿ: ಕೊಪ್ಪಳ ಪತ್ರಕರ್ತರಿಂದ ಹರ್ಷ

ಕೊಪ್ಪಳ 29: ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವತಿಯಿಂದ ಅಂತಾರಾಷ್ಟ್ರೀಯ ಶುಶ್ರುಷಕಿಯರ ದಿನಾಚರಣೆಯ ಪ್ರಯುಕ್ತ 2020ನೇ ಸಾಲಿನ ಪತ್ರಿಕೋದ್ಯಮ ಕ್ಷೇತ್ರದ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ನೀಡಲಾಗುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಧರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಪ್ರಶಸ್ತಿ ಪತ್ರ ಮತ್ತು ಮಧರ್ ತೆರೇಸಾ ಟ್ರೋಫಿಯನ್ನು ನೀಡಿ ಗೌರವಿಸಿರುವುದಕ್ಕೆ ಕೊಪ್ಪಳದಲ್ಲಿ ಕಾರ್ಯನಿರತ ಪತ್ರಕರ್ತರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಸದರಿ ಪ್ರತಿಷ್ಠಿತ ಪ್ರಶಸ್ತಿಯು ನಮ್ಮ ಸಂಘದ ರಾಜ್ಯಾಧ್ಯಕ್ಷರಿಗೆ ಲಭಿಸಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ. ತಮ್ಮನ್ನು ತಾವು ನಿರಂತರ ಮತ್ತು ಸಕ್ರಿಯವಾಗಿ ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುವುದರ ಜೊತೆಗೆ ಪತ್ರಕರ್ತರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ಅವರು ಬೇಕು ಬೇಡಿಕೆಗಳ ಈಡೇರಿಕೆಗಾಗಿ ಶ್ರಮಿಸುತ್ತ ರಾಜ್ಯಾದ್ಯಂತ ಪತ್ರಕರ್ತರ ವಲಯದಲ್ಲಿ ಮನೆ ಮಾತಾಗಿರುವ ಇವರ ಸೇವೆಗೆ ಸದರಿ ಪ್ರಶಸ್ತಿ ಲಭಿಸಿರುವುದಕ್ಕೆ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಸಾಧಿಕ್ ಅಲಿ, ರಾಜ್ಯ ಕಾರ್ಯಕಾರಣಿ ಸದಸ್ಯ ಜಿ.ಎಸ್.ಗೋನಾಳ ಸೇರಿದಂತೆ ಜಿಲ್ಲೆಯ ಪದಾಧಿಕಾರಿಗಳು, ಸಂಘದ ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.