ಶಿಶುಪಾಲನಾ ಕೇಂದ್ರ ಆರೈಕೆದಾರರಿಗೆ ತರಬೇತಿ

ಧಾರವಾಡ, ಆ.5: ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಸಾಮಥ್ರ್ಯ ಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಧಾರವಾಡ ಜಿಲ್ಲೆಯ 07 ತಾಲೂಕುಗಳ ಗ್ರಾಮ ಪಂಚಾಯತಿ ವ್ಯಾಪ್ತಿಯ 102 ಶಿಶುಪಾಲನಾ ಕೇಂದ್ರದ ಆರೈಕೆದಾರರ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

   ತರಬೇತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಚಾಲನೆ ನೀಡಿ, ಶಿಶು ಪಾಲನೆ ಕುರಿತು ಮಾಹಿತಿಯನ್ನು ನೀಡಿದರು  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು, ಮುಖ್ಯ ಯೋಜನಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಂಪನ್ಮೂಲ ವ್ಯಕ್ತಿಗಳು,  ಐಇಸಿ ಸಂಯೋಜಕರು ಮತ್ತು  ಶಿಬಿರಾರ್ಥಿಗಳು ಹಾಜರಿದ್ದರು.