ಶಿಸ್ತು, ಒಗ್ಗಟ್ಟು ಅಗತ್ಯ:ಕೈ ನಾಯಕರಿಗೆ ಖರ್ಗೆ ಕಿವಿಮಾತು

ನವದೆಹಲಿ,ಜೂ.೮- ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳು ಮತ್ತು ನಾಯಕರ ಸಹಕಾರ ಮತ್ತು ಬೆಂಬಲದಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶ ಬಂದಾಗಿದೆ. ಜನರು ನೀಡಿರುವ ತೀರ್ಪು ಸ್ವಾಗತಿಸಬೇಕಾಗಿದೆ. ಈಗ ನಾವು ಶಿಸ್ತುಬದ್ಧ ಮತ್ತು ಒಗ್ಗಟ್ಟಿನಿಂದ ಇರಬೇಕು. ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಯಾವ ಯಾವ ರಾಜ್ಯದಲ್ಲಿ ಗೆಲುವು ಸಾಧಿಸಲು ಸಾದ್ಯವಾಗಿಲ್ಲವೋ ಅಂತಹ ಕಡೆ ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆಲವು ರಾಜ್ಯಗಳಲ್ಲಿ ನಾವು ನಮ್ಮ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸದ್ದೇವೆ ಇನ್ನೂ ಕೆಲವು ರಾಜ್ಯಗಲ್ಲಿ ಸಾಧನೆ ಮಾಡಲು ಸಾದ್ಯವಾಗಿಲ್ಲ.ಅಂತಹ ಕಡೆ ಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ ಎಂದಿದ್ದಾರೆ.
ಪ್ರತಿಯೊಂದು ರಾಜ್ಯಗಳ ಬಗ್ಗೆ ನಾವು ಶೀಘ್ರದಲ್ಲೇ ಪ್ರತ್ಯೇಕ ಚರ್ಚೆಗಳನ್ನು ನಡೆಸುತ್ತೇವೆ. ತುರ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳ ಬೇಕಾಗಿದೆ. ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ಗೆ ಒಲವು ಹೊಂದಿರುವ ರಾಜ್ಯಗಳಲ್ಲಿ ಹೆಚ್ಚಿನ ಒತ್ತು ನೀಡಬೇಕಾಗಿದೆ. ಅಲ್ಲಿ ಅವಕಾಶಗಳನ್ನು ಹೊಂದಿದ್ದೇವೆ ಅದನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳುವುದಿಲ್ಲ ಆದರೆ ಅದನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ನ್ಯಾಯ ಯಾತ್ರೆ ಸಾಗಿದ ಹಾದಿಯಲ್ಲಿ ಜಯ ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಮತ ಶೇಕಡಾವಾರು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ ಎಂಬ ಅಂಶಕ್ಕೆ ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
“ಮಣಿಪುರದಲ್ಲಿ ಎರಡೂ ಸ್ಥಾನಗಳನ್ನು ಗೆದ್ದಿದ್ದೇವೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸ್ಥಾನಗಳನ್ನು ಗೆದ್ದಿದ್ದೇವೆ. ಮಹಾರಾಷ್ಟ್ರದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೇವೆ. ಎಲ್ಲಾ ವರ್ಗದ ಜನರು ಬೆಂಬಲಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಲು ಕಾಂಗ್ರೆಸ್ ಪಕ್ಷ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವನ್ನು ನೋಡಿದ್ದೇವೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಾವು ನಮ್ಮ ಅಸ್ತಿತ್ವವನ್ನು ಅನುಭವಿಸಬೇಕಾಗಿದೆ ನಗರ ಪ್ರದೇಶಗಳು ಸಹ ಗಮನ ಹರಿಸಬೇಕಾಗಿದೆ ಎಂದು ತಿಳಿಸಿದರು.
ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿ ನಮ್ಮ ಸಾಧನೆಯನ್ನು ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ಪ್ರತಿಯೊಂದು ರಾಜ್ಯಗಳ ಬಗ್ಗೆ ನಾವು ಶೀಘ್ರದಲ್ಲೇ ಪ್ರತ್ಯೇಕ ಚರ್ಚೆಗಳನ್ನು ನಡೆಸಬೇಕಾಗಿದೆ ಎಂದರು.