ಶೀಘ್ರದಲ್ಲೇ ಕೊರೊನಾಗೆ ಲಸಿಕೆ: . ಹರ್ಷವರ್ಧನ್ ವಿಶ್ವಾಸ

ನವದೆಹಲಿ, ನ.19- ಭಾರತದಲ್ಲಿ ಅತಿ ಶೀಘ್ರವೇ ಕೊರೋನೋ ಸೋಂಕಿಗೆ ಲಸಿಕೆ ಲಭ್ಯವಾಗಲಿದೆ ಎನ್ನುವ ಮಹತ್ವದ ಮಾಹಿತಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಹೊರಹಾಕಿದ್ದಾರೆ.

ಎಲ್ಲವೂ ನಿಗದಿಯಂತೆ ನಡೆದರೆ ಫೆಬ್ರವರಿ ಇಲ್ಲವೇ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಲಭ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ವಿಶೇಷ ಸಂದರ್ಶನದಲ್ಲಿ ಅವರು ಈ ಮುಂಚೆ ಜೂನ್ ಅಂತ್ಯದ ವೇಳೆಗೆ ಭಾರತದಲ್ಲಿ 25ರಿಂದ 30 ಕೋಟಿ ಜನರಿಗೆ ಕೊರೋನಾ ಲಸಿಕೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿ ಇದ್ದೆವು ಈಗ ಅದಕ್ಕೂ ಮುನ್ನವೇ ಲಭ್ಯವಾಗುತ್ತದೆ ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಲಸಿಕೆ ಮತ್ತು ಪುಣೆಯಲ್ಲಿರುವ ಭಾರತೀಯ ಸೆರಂ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೊರೋನಾ ಸೋಂಕಿನ ಮೂರನೇ ಹಂತದ ಪ್ರಯೋಗ ಬಹುತೇಕ ಮುಗಿಯುವ ಹಂತದಲ್ಲಿದೆ ಹೀಗಾಗಿ ಯಾವುದೇ ಕ್ಷಣದಲ್ಲಿ ಲಭ್ಯವಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಭಾರತ್ ಬಯೋಟೆಕ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿರುವ ಲಸಿಕೆಯು ಪ್ರಯೋಗದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಫಿಫಿಜರ್ ಮತ್ತು ಬಯೋನ್ ಟೆಕ್ ಅಭಿವೃದ್ಧಿ ಪಡಿಸಿರುವ ಲಸಿಕೆ ಶೇ.95 ರಷ್ಟು ಯಶಸ್ವಿಯಾಗಿದೆ. ರಷ್ಯಾ ಅಭಿವೃದ್ದಿ ಪಡಿಸಿರುವ ಸ್ಪುಟ್ನಿಕ್-ವಿ ಎರಡನೇ ಮೂರನೇ ಹಂತದಲ್ಲಿದ್ದು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಲಸಿಕೆ ಸಿಗುವುದು ಬಹುತೇಕ ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.