ಶೀಘ್ರದಲ್ಲೇ ಸಾವಿರ ಆಕ್ಸಿಜನ್ ಬೆಡ್ ಆನಂದಸಿಂಗ್

ಕೊಟ್ಟೂರು, ಏ.27: ‘ಕೋವಿಡ್‌–19 ತೀವ್ರ ಗತಿಯಲ್ಲಿ ಹರಡುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು’ ಎಂದು ಮೂಲ ಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್‌ ಖಾತೆ ಸಚಿವ ಆನಂದ್‌ ಸಿಂಗ್, ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಂದಾಲ್ ನಲ್ಲಿ 1000 ಆಕ್ಸಿಜನ್ ಬೆಡ್ ಶೀಘ್ರದಲ್ಲಿ ಆರಂಭ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಎ ಸಿ ಚಂದ್ರಶೇಖರಯ್ಯ, ತಹಶೀಲ್ದಾರ್ ಜಿ ಅನಿಲ್ ಕುಮಾರ್ ಮತ್ತಿತರರು ಇದ್ದರು.