ಶೀಘ್ರ ಆಪರೇಶನ್ ಡಿ ಟ್ರೇಲರ್

 ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರಕ್ಕೆ ಡಬ್ಬಿಂಗ್ ಸೇರಿದಂತೆ ಮತ್ತಿತರ ಕೆಲ ಆರಂಭವಾಗಿದೆ, ಶೀಘ್ರದಲ್ಲೇ  ಟ್ರೇಲರ್ ಬಿಡುಗಡೆಯಾಗಲಿದೆ.

ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ತಿರುಮಲೇಶ್ ವಿ  ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಹಾಗೂ ಕ್ರಿಯೇಟಿವ್ ಹೆಡ್ ಆಗಿ ಸುರೇಶ್ .ಬಿ. ಕಾರ್ಯ ನಿರ್ವಹಿಸಿದ್ದಾರೆ.

ತಿರಮಲೇಶ್  ರಾಜ ರವಿಶಂಕರ್, ಸಿದ್ದರಾಜು, ಪ್ರಶಾಂತ್  ಜೊತೆಗೂಡಿ  ಸಂಭಾಷಣೆ ಬರೆದಿದ್ದಾರೆ. ವೇದಿಕ ಹಾಗೂ ದ್ವೈಪಾಯನ‌  ಸಿಂಗ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಕೆಂಪಗಿರಿ ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡು ರಚಿಸಿದ್ದಾರೆ. ಅನಿರುದ್ಧ್ ಶಾಸ್ತ್ರಿ ಮೊದಲ ಬಾರಿಗೆ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ವೇದಿಕ ಹಾಗೂ ಪೃಥ್ವಿ ಭಟ್ ಸಾಥ್ ನೀಡಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ

 ಈ ಚಿತ್ರದ ನೃತ್ಯ ನಿರ್ದೇಶಕರು. ವಿನೋದ್ ದೇವ್, ಸುಹಾಸ್ ಆತ್ರೇಯ,  ರುದ್ರೇಶ್ ಬೂದನೂರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಪ ಇದ್ದಾರೆ.

ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ಮಹೇಶ್ ಎಸ್ ಕಲಿ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್,ಕಿರಣ್ ಈಡಿಗ, ರವಿಶಂಕರ್,ಶಿವಾನಂದ, ಸೂರ್ಯವಂಶಿ, ನಂಜಪ್ಪ ಎಸ್ ದೊಡ್ಡಮದುರೆ ಆರ್ ಜೆ ಧೀರಜ್, ಪೃಥ್ವಿ ಬನವಾಸಿ, ಆಶಾ, ರೂಪ ಆರ್, ಧನಲಕ್ಷ್ಮೀ, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್,ನಾಗರಾಜ್ ಕೀಲಗೆರೆ,ಖಾದರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.