ಶೀಘ್ರ ನೀರಾವರಿ ಸಲಹಾ ಸಮಿತಿ ಸಭೆ ಕರೆಯಿರಿ; ಪರಶು ನಾಯಕ್ ಸಿದ್ದಾಪುರ

(ಸಂಜೆವಾಣಿ ವಾರ್ತೆ)
ಸುರಪುರ : ನ.24:ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಒದಗಿಸಲು ನಾರಾಯಣಪುರ ಬಸವಸಾಗರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕುರಿತು ಚರ್ಚಿಸಲು ಶೀಘ್ರವೇ ಸಲಹಾ ಸಮಿತಿ ಸಭೆಯನ್ನು ಕರೆಯುವಂತೆ ವಾಲ್ಮೀಕಿ ಸಂಘಟನೆಯ ಹುಣಸಗಿ ತಾಲೂಕಿನ ಸಹಕಾರ್ಯದರ್ಶಿ ಪರಶು ನಾಯಕ್ ಸಿದ್ದಾಪುರ(ಬಿ) ಆಗ್ರಹಿಸಿದ್ದಾರೆ.
ಈಗಾಗಲೇ ರೈತರು ಭತ್ತ ನಾಟಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ, ನೀರು ಹರಿಸುವ ಕುರಿತು ಸರ್ಕಾರ ಸರಿಯಾದ ಮಾಹಿತಿ ನೀಡದಿರುವುದರಿಂದ ರೈತರು ಆತಂಕದಲ್ಲಿದ್ದಾರೆ, ಸರ್ಕಾರದ ವಿಳಂಬ ಧೋರಣೆಯನ್ನು ರೈತ ಸಮಿತಿ ಖಂಡಿಸುತ್ತಿದೆ ಎಂದು ತಿಳಿಸಿದ್ದಾರೆ.
ನೀರಾವರಿ ಸಲಹಾ ಸಮಿತಿಗೆ ಸಂಬಂಧಪಟ್ಟ ಸಚಿವರು, ಸಂಸದರು ಹಾಗೂ ಶಾಸಕರು ಇಚ್ಚಾಶಕ್ತಿ ಪ್ರದರ್ಶಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.