ಶೀಘ್ರ ಪರಿಹಾರಕ್ಕೆ ಕ್ರಮ ಜರುಗಿಸಿ

ಗದಗ, ನ.22: ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಿರಹಟ್ಟಿ ತಾಲೂಕಿನ ಚವಡಾಳ, ತೊಳಲಿ ಹಾಗೂ ತಂಗೋಡ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದಾಗಿ ಹಾನಿಗೊಳಗಾದ ಭತ್ತ, ಗೋವಿನ ಜೋಳ ಬೆಳೆಗಳನ್ನು ಪರಿಶೀಲಿಸಿದರು. ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಹಾನಿಗೊಳಗಾದಂತಹ ಬೆಳೆಗಳ ಸಮೀಕ್ಷಣಾ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ನಿರಂತರ ಮಳೆಯಿಂದಾಗಿ ಬಹುತೇಕ ಕೃಷಿ ಪ್ರದೇಶ ಹಾನಿಗೊಳಗಾಗಿದ್ದು ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಣೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ಎಲ್ಲ ಇಲ್ಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವದರ ಮೂಲಕ ಸಾಧ್ಯವಾದಷ್ಟು ಬೇಗನೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ತಹಶೀಲ್ದಾರ ಜೆ.ಬಿ.ಮಜ್ಜಗಿ ಮಾತನಾಡಿ ನಿರಂತರ ಮಳೆಯಿಂದಾಗಿ ಶಿರಹಟ್ಟಿ ತಾಲೂಕಿನಲ್ಲಿ ಅಂದಾಜು 150 ಮನೆ ಹಾನಿ ಸೇರಿದಂತೆ 70 ಹೆಕ್ಟೆರ ಭತ್ತ, 60ಹೆ. ಗೋವಿನ ಜೋಳ, 24ಹೆ. ಶೇಂಗಾ, 40 ಹೆ. ಈರುಳ್ಳಿ ಹಾಗೂ 20 ಹೆ. ಮೆನಸಿನಕಾಯಿ ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದ್ದು ಈ ಕುರಿತು ಸಮೀಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.