ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ – ತಜ್ಞ ವೈದ್ಯರ ತಂಡ ಸೂಚನೆ

ದಾವಣಗೆರೆ ಏ. 27;ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಬಹುತೇಕ ತಜ್ಞ ವೈದ್ಯರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಣಗಳದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ತಜ್ಞ ವೈದ್ಯರು, ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಂಭವಿಸುವ ಮರಣ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಬರುವ 15 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಎಷ್ಟಾಗಬಹುದು. ಇದಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೋವಿಡ್ 2ನೇ ಅಲೆಯಲ್ಲಿ ರೋಗಲಕ್ಷಣಗಳೂ ಕೂಡ ಕೆಲವು ರೋಗಿಗಳನ್ನು ಭಿನ್ನವಾಗಿ ಕಂಡುಬಂದಿವೆ. ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕೋವಿಡ್‌ನ ಆರಂಭಿಕ ಹಂತದಲ್ಲಿ ಕಂಡುಬಂದಿತ್ತು. ಆದರೆ ಇತ್ತೀಚಿನ ಪ್ರಕರಣಗಳನ್ನು ಗಮನಿಸಿದಾಗ, ಜ್ವರ ಇಲ್ಲದಂತಹ ಪ್ರಕರಣಗಳು, ವಾಂತಿಬೇಧಿ, ಕಣ್ಣು ಕೆಂಪಾಗುವುದು, ತಲೆನೋವು, ಮೈಕೈನೋವು ರೋಗ ಲಕ್ಷಣಗಳು ಇರುವುದು ಕಂಡುಬAದಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬAದಲ್ಲಿ ಕೂಡಲೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು, ಸೋಂಕು ದೃಢಪಟ್ಟಲ್ಲಿ ಆತಂಕಕ್ಕೆ ಒಳಗಾಗದೆ ತಜ್ಞ ವೈದ್ಯರ ಶಿಫಾರಸ್ಸಿನಂತೆ ಚಿಕಿತ್ಸೆ ಪಡೆದುಕೊಳ್ಳಬೇಕು. ಬೇಗ ರೋಗ ಪತ್ತೆಯಾದಲ್ಲಿ, ಚಿಕಿತ್ಸೆ ಪಡೆದು ಬೇಗ ಗುಣಮುಖರಾಗಬಹುದು. ಆದರೆ ರೋಗ ಪತ್ತೆ ಮಾಡಿಸಿಕೊಳ್ಳದೆ, ಸೋಂಕು ಉಲ್ಬಣಗೊಂಡು, ಶ್ವಾಸಕೋಶದಲ್ಲಿ ಸೋಂಕು ತೀವ್ರಗೊಂಡು, ತಡವಾಗಿ ಆಸ್ಪತ್ರೆಗೆ ಬರುವುದು ರೋಗಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಾಮಾನ್ಯವಾಗಿ ಕೋವಿಡ್‌ನಿಂದ ಮರಣ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ತಡವಾಗಿ ಆಸ್ಪತ್ರೆಗೆ ಬಂದವರಲ್ಲೇ ಹೆಚ್ಚಿನ ಮರಣ ಸಂಭವಿಸಿದೆ ಎಂದು ತಜ್ಞ ವೈದ್ಯರು ಹೇಳಿದರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ಬಿಡಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ, ಸ್ವಯಂ ಚಿಕಿತ್ಸೆ ಪಡೆಯದೆ, ಸಿಕ್ಕ ಸಿಕ್ಕ ಗುಳಿಗೆಗಳನ್ನು ನುಂಗದೆ, ಓಣಿಗಳಲ್ಲಿನ ಸಣ್ಣಪುಟ್ಟ ವೈದ್ಯರಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾಗುವ ದುಸ್ಸಾಹಸಕ್ಕೆ ಕೈಹಾಕದೆ, ಕೂಡಲೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದರುರೆಮ್‌ಡೆಸಿವರ್ ಔಷಧ ದುರ್ಬಳಕೆಗೆ ಕಡಿವಾಣ : ಜಿಲ್ಲೆಯಲ್ಲಿ ರೆಮ್‌ಡೆಸಿವರ್ ಚುಚ್ಚುಮದ್ದು ಅಕ್ರಮ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಈಗಾಗಲೆ ಅಕ್ರಮ ಎಸಗಿದ 02 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೆಮ್‌ಡೆಸಿವರ್ ಸೇರಿದಂತೆ ತುರ್ತು ಸಂದರ್ಭಕ್ಕೆ ಬಳಸುವ ಔಷಧಿಯನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ದಾಸ್ತಾನಿಗೆ ಆಗಮಿಸಿದ ವಿವರ, ನೀಡಲಾದ ರೋಗಿ ಹಾಗೂ ಔಷಧದ ಎಸ್‌ಎಫ್‌ಆರ್-ಐಡಿಯನ್ನು ನಮೂದಿಸಬೇಕು. ಈ ಐಡಿ ಇಲ್ಲದೆ ಯಾರಿಗೂ ಔಷಧಿಯನ್ನು ಕೊಡುವಂತಿಲ್ಲ. ಜಿಲ್ಲೆಯಲ್ಲಿ ಇದಕ್ಕಾಗಿ ಫ್ಲೆöÊಯಿಂಗ್ ಸ್ಕಾ÷್ವಡ್ ತಂಡವನ್ನು ರಚಿಸಲಾಗಿದ್ದು, ಈ ಅಧಿಕಾರಿಗಳು, ವಿವಿಧೆಡೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೆಮ್‌ಡೆಸಿವರ್ ಚುಚ್ಚುಮದ್ದನ್ನು ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ, ಅಗತ್ಯವಿರುವ ರೋಗಿಗೆ ಮಾತ್ರ ನೀಡಬೇಕು. ಕೋವಿಡ್ ಸೋಂಕಿತ ಎಲ್ಲ ರೋಗಿಗಳಿಗೂ ನೀಡಬಾರದು. ರೆಮ್‌ಡೆಸಿವರ್ ಔಷಧಿಯನ್ನು ಬೇಕಾಬಿಟ್ಟಿಯಾಗಿ ಶಿಫಾರಸು ಮಾಡುವವರ ವಿರುದ್ಧ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು. ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ : ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಂದಣಿ ತಡೆಯುವ ಉದ್ದೇಶ ಹಾಗೂ ಸ್ಥಳ ಅಭಾವದ ಕಾರಣದಿಂದ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆಯ ಬದಲಿಗೆ ಬೇರೆಡೆ ಲಸಿಕೆಯನ್ನು ನೀಡುವಂತೆ ತಜ್ಞ ವೈದ್ಯರ ಸಲಹಾ ಸಮಿತಿ ನೀಡಿದ ಶಿಫಾರಸಿನಂತೆ, ನಾಳೆಯಿಂದ ಜಿಲ್ಲಾ ಆಸ್ಪತ್ರೆ ಸಮೀಪದ ಮೋತಿ ವೀರಪ್ಪ ಕಾಲೇಜಿನಲ್ಲಿ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಸಭೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಿಹೆಚ್‌ಒ ಡಾ. ನಾಗರಾಜ್, ತಜ್ಞ ವೈದ್ಯರ ಸಮಿತಿ ಸದಸ್ಯರುಗಳಾದ ಡಾ. ರವಿ, ಡಾ. ಬಿ.ಎಸ್. ಪ್ರಸಾದ್, ಡಾ. ಶಿವಕುಮಾರ್, ಡಾ. ಅರುಣ್‌ಕುಮಾರ್ ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡಿದ್ದರು.