ಶೀತಲಕುಮಾರ ಓಗಿ ನೇಮಕ

ಸಂಜೆವಾಣಿ ವಾರ್ತೆ,
ವಿಜಯಪುರ, ಮಾ.7:ನಗರದ ಶೀತಲಕುಮಾರ ಓಗಿ ಅವರನ್ನು ಬಿಜೆಪಿ ಜಿಲ್ಲಾ ಅಲ್ಪ ಸಂಖ್ಯಾತರ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತರ ಮೋರ್ಚಾ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಪರೋಕ್ಷವಾಗಿ, ಅಪರೋಕ್ಷವಾಗಿ ಸಹಕರಿಸಿದ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಸೇರಿದಂತೆ ಪಕ್ಷದ ಎಲ್ಲ ನಾಯಕರು, ಮುಖಂಡರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.