
ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಶೀಲ” ಚಿತ್ರ ಸದ್ದು ಗದ್ದಲವಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿದೆ. ಕನ್ನಡ ಮತ್ತು ಮಲೆಯಾಳಂ ಭಾಷೆಯಲ್ಲಿ ತಿಂಗಳಾಂತ್ಯಕ್ಕೆ ತೆರೆಗೆ ಬರಲು ಸಜ್ಜಾಗಿದೆ.
ಚಿತ್ರದ ಪೋಸ್ಟರ್ ಬಿಡುಗಡೆ ಇತ್ತು ಈ ವೇಳೆ ಮಾತಿಗಿಳಿದ ನಟಿ ರಾಗಿಣಿ, ಇದೊಂದು ಮಹಿಳಾ ಪ್ರಧಾನ ಚಿತ್ರ.ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಚಿತ್ರ ಮಾಡಲಾಗಿದೆ. ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ.
ಹೆಣ್ಣು ಮನಸ್ಸು ಮಾಡಿದರೆ, ಎದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಕೂಡ ಈ ಚಿತ್ರದಲ್ಲಿ ತೋರಿಸಿದ್ದೇವೆ. ಹೆಣ್ಣು ಲಕ್ಷ್ಮೀ ಯೂ ಹೌದು ಕಾಳಿಯೂ ಹೌದು ಎಂದು ಪಾತ್ರ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ನಿರ್ದೇಶಕ ಬಾಲು ನಾರಾಯಣನ್ ಕೇರಳ ದ ವಿವಿಧ ಭಾಗ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಹಾಗೂ ಮಲೆಯಾಳಂ ಎರಡೂ ಭಾಷೆಗಳಲ್ಲೂ ಚಿತ್ರೀಕರಣವಾಗಿದೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದರು.
ನಿರ್ಮಾಪಕ ಡಿಎಂ ಪಿಳ್ಳೈ ಮಾಹಿತಿ ನೀಡಿ ಕಳೆದ ಮೂವತ್ತೈದು ವರ್ಷಗಳಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದೇವೆ. ನಿರ್ಮಾಣದ ಮೊದಲ ಚಿತ್ರ.. ನೋಡಿ. ಪೆÇ್ರೀತ್ಸಾಹಿಸಿ ಎಂದರು
ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ ಜೊತೆಗೆ ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಸೇರಿದಂತೆ ಹಲವು ನಟಿಸಿದ್ದಾರೆ.