ಶುದ್ದ ಕುಡಿಯುವ ನೀರು ಪೂರೈಕೆ: ಮೋದಿ ಮುಂದಿನ ಚುನಾವಣೆ ಗುರಿ

ನವದೆಹಲಿ,ಮಾ. ೧೪- ದೇಶದ ಬಡಜನರಿಗೆ ಉಚಿತ ಅಡುಗೆ ಅನಿಲ, ಶೌಚಾಲಯ ನಿರ್ಮಾಣ, ವಿದ್ಯುತ್ ಸಂಪರ್ಕ ಕಲ್ಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ೨೦೨೪ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಸಂಪರ್ಕಕಲ್ಪಿಸಲು ಮುಂದಾಗಿದ್ದಾರೆ.
ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ೧೯.೨ ಕೋಟಿ ಗ್ರಾಮಗಳ ಮನೆಗಳಿಗೆ ಪೈಪ್ ಲೈನ್ ಮೂಲಕ ಶುದ್ಧ ಕುಡಿಯುವ ನೀರು ಸೌಲಭ್ಯ ಒದಗಿಸಲು ಮುಂದಾಗಿದ್ದು ಇದಕ್ಕಾಗಿ ೩.೬ ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದಾರೆ.
ದೇಶದಲ್ಲಿ ಸದ್ಯ ಏಳುಕೋಟಿ ಕುಟುಂಬಕ್ಕೆ ಪೈಪ್ ಲೈನ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಸದ್ಯ ಒಟ್ಟಾರೆ ಶೇಕಡಾ ೩೬ರಷ್ಟು ಸೌಲಭ್ಯವನ್ನು ಮಾತ್ರ ಹೊಂದಿದ್ದು ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು ಇಪ್ಪತ್ತು ಕೋಟಿ ಕುಟುಂಬಗಳಿಗೆ ಪೈಪ್ ಲೈನ್ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವುದು ಸುಲಭದ ಸಂಗತಿಯಲ್ಲ.
ಕೇಂದ್ರ ಜಲ ಶಕ್ತಿ ಸಚಿವಾಲಯ ೨೦೨೪ರ ವೇಳೆಗೆ ದೇಶದ ಎಲ್ಲ ಗ್ರಾಮಗಳ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೈಪ್ ಲೈನ್ ಮೂಲಕ ಕಲ್ಪಿಸಲು ಕಾರ್ಯಕ್ರಮ ಮಾಡಲು ಮುಂದಾಗಿದೆ.
ಉತ್ತರಪ್ರದೇಶದಲ್ಲಿ ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೆ ತಂದಿದ್ದು ಅದನ್ನು ದೇಶದ ಎಲ್ಲೆಡೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ.
ದೇಶದ ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಇನ್ನೂ ಅನೇಕ ಗ್ರಾಮಗಳಲ್ಲಿ ಇಲ್ಲ ಇದನ್ನು ಮನಗಂಡು ಇಂತಹ ಕೆಲಸಕ್ಕೆ ಕೈ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ
ಮುಂಬರುವ ಲೋಕಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗಮನದಲ್ಲಿಟ್ಟುಕೊಂಡು ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ…
ದಿನನಿತ್ಯ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಬೆಲೆ ಏರಿಕೆ ಜೊತೆಗೆ ಕೃಷಿ ಕಾಯ್ದೆಗಳನ್ನು ನಾಲ್ಕು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಎಲ್ಲಾ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ವಿರೋಧಪಕ್ಷಗಳು ಆರೋಪಿಸಿವೆ.
೨೦೧೪ ರಲ್ಲಿ ಮೊದಲ ಬಾರಿಗೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೨೦೧೯ರಲ್ಲಿ ಎರಡನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದಿದೆ ಇದೀಗ ೨೦೨೪ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ