ಶುದ್ಧ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ರಾಯಚೂರು, ಸೆ.೬, ಅಮೃತ ನಗರೋತ್ಪನ ಅಡಿಯಲ್ಲಿ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕೊರೆತೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಮೃತ ನಗರೋತ್ಪನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ರಾಜೀವ್ ಗಾಂಧಿ ವಸತಿ ನಿಗಮ ಯೋಜನೆ ಅಡಿಯಲ್ಲಿ ನಿವೇಶನಗಳು ಇಲ್ಲದವರಿಗೆ ನಿವೇಶನ ನೀಡುವಂತೆ ಸೂಚನೆ ನೀಡಿದರು.ವಯೋವೃದ್ದರಿಗೆ ನಿವೇಶನಗಳನ್ನು ನೀಡಬೇಕು.
ಹೀಗಾಗಿ ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಲು ಸೂಚನೆ ನೀಡಿದರು.
೨೦೨೫ ವೇಳೆಗೆ ನಗರದಲ್ಲಿ ಎಷ್ಟು ನಿವೇಶನಗಳು ಹೆಚ್ಚಾಗುತ್ತೇವೆ ಅದರ ಸಮೀಕ್ಷೆ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಆಯಾ ತಾಲೂಕುಗಳ ವರದಿ ಪ್ರಕಾರ ಓವರ್ ಟ್ಯಾಂಕ್ ಮತ್ತು ಕೆರೆ ನಿರ್ಮಾಣ ಮಾಡುವ ವ್ಯವಸ್ಥೆ ಮಾಡಬೇಕು ಎಂದರು.ನಿವೇಶನಗಳು ಇಲ್ಲದವರಿಗೆ ನಗರಸಭೆಯಿಂದ ಅರ್ಹ ಫಲಾನುಭವಿಗಳಿಗೆ ನಿವೇಶನ ಮಂಜೂರು ಆಗುವಂತೆ ವ್ಯವಸ್ಥೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಗುರುಲಿಂಗಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಮಹೇಂದ್ರ ಕುಮಾರ್, ಇಇ ಶರಣಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.