ಜೇವರ್ಗಿ :ಜೂ.30: ಕುಡಿಯುವ ನೀರು ಮೆಡಿಕಲ್ ಟೆಸ್ಟ್ ಮಾಡಿ, ಎಲ್ಲ ಓವರ್ ಹೆಡ್ ಟ್ಯಾಂಕ್ ಗಳನ್ನು ಶುದ್ಧಗೊಳಿಸಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭನ್ವಾರ್ ಸಿಂಗ್ ಮಿನಾ ರವರು ಅಧಿಕಾರಿಗಳಿಗೆ ಸೂಚಿಸಿದರು.
ಜೇವರ್ಗಿ ತಾಲೂಕು ಪಂಚಾಯತ್ ಹಳೆ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಅವರು, ಮಾತನಾಡಿದರು. ಸ್ಯಾಂಪಲ್ ಟೆಸ್ಟ್ 2 ರಿಂದ 3 ಬಾರಿ ಮಾಡಿಸಬೇಕು, ನೀರಿನ ಪೈಪ್ ಗಳು ಡ್ಯಾಮೆಜ್ ಕಂಡುಬಂದಲ್ಲಿ ಅವುಗಳನ್ನು ಕೂಡಲೇ ದುರಸ್ತಿ ಮಾಡಿಸಬೇಕು ಮತ್ತು ಸ್ವಚ್ಛತೆಗೆ ಒತ್ತು ಕೊಡಬೇಕು ಎಂದು ತಾಕೀತು ಮಾಡಿದರು.
ಇದಕ್ಕೂ ಮೊದಲು ಮಹಾತ್ಮ ಗಾಂಧಿನರೇಗಾ ಯೋಜನೆ ಪ್ರಗತಿ ಪರಿಶೀಲಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಓ ರವರು ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಬೇಕು, ಕರವಸೂಲಿ, ವಾರ್ಡ್ ಸಭೆ ಮಾಡಿ ದೂರದೃಷ್ಟಿ ಸೇರಿದಂತೆ ಎಲ್ಲ ಯೋಜನೆಗಳ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಬಿ,ಸಹಾಯಕ ನಿರ್ದೇಶಕ ಸೋಮಶೇಖರ್ ಜಾಡರ್, ತಾ.ಪಂ ವ್ಯವಸ್ಥಾಪಕ ಸುಭಾಷ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಎಲ್ಲ ಯೋಜನೆಗಳ ವಿಷಯ ನಿರ್ವಾಹಕರು, ತಾಂತ್ರಿಕ ಸಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು ಮತ್ತು ಗ್ರಾಮ ಪಂಚಾಯತಿ ಡಿಇಓ ರವರು ಸಭೆಯಲ್ಲಿ ಭಾಗವಹಿಸಿದ್ದರು..