ಶೂಟಿಂಗ್ ವೇಳೆ ಊರ್ವಶಿಗೆ ಗಾಯ

ಹೈದರಾಬಾದ್,ಜು.೧೦-ನಟಿ ಊರ್ವಶಿ ರೌಟೇಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿಯಿದೆ.
ಸದ್ಯ ಊರ್ವಶಿ ರೌಟೇಲಾ ತೆಲುಗು ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ಅವರ ೧೦೯ನೇ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಊರ್ವಶಿ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಟಿ ಕೈ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ, ಸದ್ಯ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಊರ್ವಶಿ ರೌಟೇಲಾ ಅವರು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಸಧ್ಯ ಅವರು ದಕ್ಷಿಣ ಚಲನಚಿತ್ರ ಒಂದರ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಮತ್ತು ಬಾಬಿ ಡಿಯೋಲ್ ಜೊತೆಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಚಿತ್ರೀಕರಣದ ವೇಳೆ ನಟಿ ಗಾಯಗೊಂಡಿದ್ದಾರೆ. ಊರ್ವಶಿ ಅವರ ತಂಡವೇ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ.
ಸದ್ಯ ಅವರ ಸ್ಥಿತಿ ಉತ್ತಮವಾಗಿದೆ. ಊರ್ವಶಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಈ ವಿಷಯದ ಕುರಿತು ಯಾವುದೇ ನವೀಕರಣ ಕಂಡುಬಂದಿಲ್ಲ.
ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ನಟಿಯ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸದ್ಯದಲ್ಲೇ ಊರ್ವಶಿ ಕಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬರುವ ನಿರೀಕ್ಷೆ ಇದೆ.