ಬೀದರ್:ಜೂ.22: ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರು ಯೋಗ ಪ್ರಾತ್ಯಕ್ಷಿಕೆ ತೋರಿಸಿಕೊಟ್ಟರು.
ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಕಾರಗಳ ಅಭ್ಯಾಸ ಮಾಡಿಸಿದರು.
ಸಿದ್ಧಾರೂಢ ಮಠದ ಹಿರಿಯ ಸಾಧಕ ವಿನಾಯಕ ಗುರೂಜಿ ಕಾರ್ಯಕ್ರಮ ಉದ್ಘಾಟಿಸಿದರು. ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಶಿಕ್ಷಕ ಆನಂದ ರೆಡ್ಡಿ, ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಡಾ. ಪೂಜಾ ಜಾಧವ್, ಡಾ. ಅನಿಕೇತ ಮುಂಡೆ ಮೊದಲಾದವರು ಇದ್ದರು.