ಶೆಟಕಾರ್ ಶಾಲೆ: ಶೇ 84.34 ಫಲಿತಾಂಶ

ಬೀದರ್:ಮೇ.10: ನಗರದ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಗೆ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 84.34 ರಷ್ಟು ಫಲಿತಾಂಶ ಬಂದಿದೆ.
ಪರೀಕ್ಷೆ ಬರೆದ 115 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅಮೂಲ್ಯ ನರೇಂದ್ರ ಶೇ 94.56 ರಷ್ಟು ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ದೇವಿಕಾ ವಿಜಯಕುಮಾರ ಶೇ 94.4, ಅಶೋಕ ಶಾಲಿವಾನ್ ಶೇ 92.8, ಅಕ್ಷತಾ ಸಿದ್ರಾಮ ಶೇ 91.36, ಸೃಷ್ಟಿ ಗುರುನಾಥ ಶೇ 88.48, ದೀಪಿಕಾ ಸೋಮಶೇಖರ ಶೇ 88.16 ರಷ್ಟು ಅಂಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಚಿದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ, ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಸನ್ಮಾನ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಗುರುವಾರ ಸನ್ಮಾನಿಸಲಾಯಿತು.