ಕಾರಾವಾರ,ಏ.೧೫-ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಕ್ಷೇತ್ರ ಸಿಗುವುದಿಲ್ಲ ಎಂಬುದಾಗಿ ಗೇಲಿ ಮಾಡಿದ್ದ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪರವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್‌ನ್ನೇ ಕೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟಕಿಯಾಡಿದ್ದಾರೆ.
ಕಾರಾವಾರದ ಹಳಿಯಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಶ್ವರಪ್ಪ, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಬಿಜೆಪಿಯವರು ಸೂಕ್ತ ರೀತಿಯಲ್ಲಿ ನಡೆಸುಕೊಂಡಿಲ್ಲ ಎಂದು ದೂರಿದರು.
ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಚರ್ಚೆ ನಡೆದಿಲ್ಲ ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ. ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಿದರು. ಪಕ್ಷ ಕಟ್ಟಿದ ಮುಖಂಡರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡು ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಹೇಳಿದರು.