ಶೇ.100 ರಷ್ಟು ಮತದಾನದ ಗುರಿ : ರಿಶಿ ಆನಂದ

ವಿಜಯಪುರ ಏ.10: ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಚಲಾಯಿಸುವ ಗುರಿಯನ್ನು ಹೊಂದಲಾಗಿದೆ. ಮತದಾನ ಮಾಡುವಂತೆ ಜಾಗೃತಿ ಮೂಡಿಸುವಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಎಲ್ಲಾ ಅಧಿಕಾರಿ, ಸಿಬ್ಬಂದಿ ಸಮನ್ವಯದಿಂದ ಸಹಕರಿಸಿ ಗುರಿ ತಲುಪುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಸೋಮುವಾರ ಜಿಲ್ಲಾ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಚುನವಣೆ-2024ರ ಹಿನ್ನೆಲೆಯಲ್ಲಿ ಮತದಾನದ ಜಾಗೃತಿ ಕುರಿತು ಭಿತ್ತಿಪತ್ರಗಳು, ಬ್ಯಾನರ್ ಗಳು, ಪೆÇೀಸ್ಟರ್ ಗಳು, ಸರ್ಕಾರಿ ಕಛೇರಿಗಳಲ್ಲಿ ರವಾನೆಯಾಗುವ ಪತ್ರಗಳ ಮೇಲೆ ಮುದ್ರಿಸಲು ಶೀಲುಗಳು ಹಾಗೂ ಇತರೆ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ಕರ್ತವ್ಯವನ್ನು ನಿಭಾಯಿಸೋಣ. ಹಾಗೆಯೇ ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ವಿವಿಧ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದ್ದರಿಂದ ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ಇದೇ ವೇಳೆ ಜಿಲ್ಲಾ ಸ್ವೀಪ್ ಸಮಿತಿಯ ನೊಡೆಲ್ ಅಧಿಕಾರಿ ಸಿ. ಆರ್ ಮುಂಡರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಳಿಕ ಜಿ.ಪಂ ನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ‘ಚುನಾವಣಾ ಪರ್ವ ದೇಶದ ಗರ್ವ’, “ಮತದಾನ ನಮ್ಮೆಲ್ಲರ ಹಕ್ಕು”, “ಮತದಾನ ಮಾಡಿದವನೇ ಮಹಾಶೂರ”, ಮಾಡಿ ಮೇ 7ರಂದು ಮತದಾನ ಮಾಡಿ”, “ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿ ಬಿ. ಎಸ್.ಮೂಗನೂರಮಠ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.