ಶೇ.5ರ ಕೆಳಗಿಳಿದ ಸೋಂಕು- ನಿರಾಳ

ನವದೆಹಲಿ, ಜೂ.೯- ದೇಶದಲ್ಲಿ ನಿನ್ನೆ ದಾಖಲಾಗಿದ್ದ ಕೋರೊನಾ ಸೋಂಕು ಸಂಖ್ಯೆಗಿಂತ ಇಂದು ತುಸು ಹೆಚ್ಚಾಗಿದೆ. ಆದರೆ ಸತತ ಎರಡನೇ ದಿನವೂ ದೇಶದಲ್ಲಿ ಒಟ್ಟಾರೆ ಪಾಸಿಟಿವ್ ಪ್ರಮಾಣ ಶೇ. ೫ ಕ್ಕಿಂತ ಕಡಿಮೆ ದಾಖಲಾಗಿದೆ.
ಪ್ರತಿನಿತ್ಯ ಅತಿ ಹೆಚ್ಚು ಮಂದಿಯಲ್ಲಿ ಸೋಂಕು ಮತ್ತು ಸಾವಿನ ಪ್ರಕರಣ ದಾಖಲಾಗುತ್ತಿದ್ದ ಮಹಾರಾಷ್ಟ್ರ-ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ದಿನನಿತ್ಯದ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ.
ದೇಶದಲ್ಲಿ ಸತತ ಎರಡನೇ ದಿನವೂ ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ. ೪.೬೭ ರಷ್ಟು ದಾಖಲಾಗಿದೆ. ಸತತ ೧೬ ದಿನಗಳಿಂದ ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ. ೧೦ಕ್ಕೂ ಕಡಿಮೆ ದೃಢಪಡುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ಹೊಸದಾಗಿ ೯೨,೫೯೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೨೨೧೯ ಮುಂದೆ ಮೃತಪಟ್ಟಿದ್ದಾರೆ. ಜೊತೆಗೆ ೧,೬೨,೬೬೪ ಚೇತರಿಸಿಕೊಂಡಿದ್ದಾರೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕು ಸಂಖ್ಯೆಗಿಂತ ಚೇತರಿಕೆ ಪ್ರಮಾಣ ದ್ವಿಗುಣವಾಗುತ್ತದೆ.

ಹೊಸದಾಗಿ ದಾಖಲಾಗಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯವರಗೆ ಒಟ್ಟಾರೆಯಾಗಿ ೨,೯೦,೮೯,೦೬೯ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಅಲ್ಲದೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಅವರ ಸಂಖ್ಯೆ ೨,೭೫,೦೪,೧೨೬ ಏರಿಕೆಯಾಗಿದೆ.ಸೋಂಕಿನಿಂದ ೩,೫೩,೫೨೮ ಮಂದಿಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೇಶದ ಅನೇಕ ರಾಜ್ಯಗಳಲ್ಲಿ ಕೊರೊನಾ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ ಮತ್ತು ಚೇತರಿಕೆ ಪ್ರಮಾಣ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಅಲೆ ಇಳಿಮುಖವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

೨೩,೯೦ಕೋಟಿ?ಗೆಗೆ ಲಸಿಕೆ’:

ದೇಶದಲ್ಲಿ ಇದುವರೆಗೂ ಸರಿಸುಮಾರು ೨೪ ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನೆನ್ನೆ ಸಂಜೆ ತನಕ ೨೩,೯೦,೫೮,೩೬೦ ಲಸಿಕೆ ಹಾಕಲಾಗಿದೆ ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ

೪೪ ಕೋಟಿ ಲಭ್ಯ:

ದೇಶದಲ್ಲಿ ಕೊರೊನಾ ಸೋಂಕಿನ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ ಮಾಡುವಂತೆ ಔಷಧ ತಯಾರಿಕಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯದ ವೇಳೆಗೆ ದೇಶದಲ್ಲಿ ೪೪ ಕೋಟಿ ಡೋಸ್ ಲಸಿಕೆ ಲಭ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಪ್ರಮಾಣದ ಲಸಿಕೆ ಆಗಸ್ಟ್ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ವೇಳೆಗೆ ದೇಶದಲ್ಲಿ ಲಭ್ಯವಾಗಲಿದೆ ಹೀಗಾಗಿ ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

೧೯.೮೫ ಲಕ್ಷ ಮಂದಿಗೆ ಪರೀಕ್ಷೆ:

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸರಾಸರಿಯಲ್ಲಿ ೨೦ ಲಕ್ಷ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ – ಐಸಿಎಂಆರ್ ತಿಳಿಸಿದೆ.

ನಿನ್ನೆ ಒಂದೇ ದಿನ ೧೯,೮೫,೯೬೭ ಮಂದಿಗೆ ಪರೀಕ್ಷೆ ನಡೆಸಲಾಗಿದ್ದು ಇದುವರೆಗೂ ಒಟ್ಟಾರೆಯಾಗಿ ೩೭,೦೧,೯೩,೫೬೩ ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.