ಶೇ.96.6 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದ ಆರ್.ಕೆ.ಯಾತವನ್

ಕಲಬುರಗಿ,ಮೇ.14-ನಗರದ ಕೆನ್‍ಬ್ರಿಡ್ಜ್ ಸಿಬಿಎಸ್‍ಇ ಶಾಲೆಯು ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.
ವಿದ್ಯಾರ್ಥಿ ಆರ್.ಕೆ.ಯಾತವನ್ ಶೇ.96.6 ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.