ಶೈಕ್ಷಣಿಕ ನೀತಿ ಅಪ್ರಜಾತಾಂತ್ರಿಕ ರೀತಿ ಅನುಷ್ಠಾನ: ಎಐಡಿಎಸ್‍ಒ

ಕಲಬುರಗಿ,ಮಾ 11 ರಾಜ್ಯ ಸರ್ಕಾರವು ಶೈಕ್ಷಣಿಕ ನೀತಿಗಳನ್ನು ಯಾವುದೇ ಚರ್ಚೆಗಳಿಲ್ಲದೆ ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಎಐಡಿಎಸ್ ಒ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದ್ದಾರೆ.
ಶೈಕ್ಷಣಿಕ ವಿಷಯದಲ್ಲಿ ಪ್ರಜಾತಾಂತ್ರಿಕ ಪ್ರಕ್ರಿಯೆ ಅನುಸರಿಸಿ 5 ಮತ್ತು 8
ನೇ ತರಗತಿ ಪಬ್ಲಿಕ್ ಪರೀಕ್ಷೆ ಕುರಿತು ಉಂಟಾಗಿರುವ ಬಿಕ್ಕಟ್ಟನ್ನು ಸೂಕ್ತವಾಗಿ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಚ್ಚ ನ್ಯಾಯಾಲಯವು ಪಬ್ಲಿಕ್ ಪರೀಕ್ಷೆಯನ್ನುರದ್ದುಗೊಳಿಸುವಂತೆ ಆದೇಶ ನೀಡಿದೆ. ಅಂದರೆ, ಮೊದಲು ಪರೀಕ್ಷೆ ಬರೆಯಲು ಸಿದ್ಧರಿದ್ದವಿದ್ಯಾರ್ಥಿಗಳು ಈಗ, ಇನ್ನೇನು ಪರೀಕ್ಷೆಗೆ ಕೆಲವೇ ದಿನಗಳು ಬಾಕಿಯಿದೆ ಎನ್ನುವಾಗ
ಪರೀಕ್ಷೆಯೇ ಇಲ್ಲದಿರುವ ಸಂದರ್ಭವನ್ನು ಎದುರಿಸಬೇಕಾಗಿ ಬಂದಿದೆ.ಪರೀಕ್ಷೆಯವಿಷಯದಲ್ಲಿ ಹಠಾತ್ತಾಗಿ ಇಷ್ಟೊಂದು ಗಂಭೀರ ಸ್ವರೂಪದ ಬದಲಾವಣೆಗಳನ್ನುಮಾಡಿದರೆ, ಅದರಿಂದ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಆಗುವ ಪರಿಣಾಮದ ಕುರಿತು ಯಾರುಆಲೋಚಿಸಿದ್ದಾರೆ?
ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೆÇೀಷಕರಲ್ಲಿ ಪಬ್ಲಿಕ್ ಪರೀಕ್ಷೆಯ ಕುರಿತು
ಉಂಟಾಗಿರುವ ಗೊಂದಲಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಪ್ರಜಾತಾಂತ್ರಿಕಪ್ರಕ್ರಿಯೆಯನ್ನು ಅನುಸರಿಸಿದ್ದರೆ ಈ ಗೊಂದಲವನ್ನು ತಪ್ಪಿಸಬಹುದಿತ್ತು.ಯಾವುದೇ ಶೈಕ್ಷಣಿಕ ನೀತಿಯನ್ನು ರೂಪಿಸುವ ಮೊದಲು ರಾಜ್ಯ ಸರ್ಕಾರವುಅದಕ್ಕೆ ಸಂಬಂಧಪಟ್ಟ ಎಲ್ಲರೊಂದಿಗೆ ಮುಖ್ಯವಾಗಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂಪೆÇೀಷಕರೊಂದಿಗೆ ಚರ್ಚಿಸಿ ನಂತರವೇ ನೀತಿಯ ಅನುಷ್ಠಾನ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.