ಶೈಕ್ಷಣಿಕ ಬೆಳವಣಿಗೆ : ಅಂಗನವಾಡಿ ಕೇಂದ್ರಗಳ ಪಾತ್ರ ಮುಖ್ಯ

ಲಿಂಗಸುಗೂರು.ನ.೨೦-ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ ಎನ್ನುವ ಗಾದೆ ಮಾತಿನಂತೆ, ಶಾಲಾಪೂರ್ವ ತರಬೇತಿ ನೀಡುವ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಪುರಸಭೆ ಉಪಾದ್ಯಕ್ಷ ಮೊಹ್ಮದ್ ರಫಿ ಹೇಳಿದರು.
ಪುರಸಭೆ ವ್ಯಾಪ್ತಿಯ ಕರಡಕಲ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಶಾಲಾಪೂರ್ವ ಶಿಕ್ಷಣ ಬಲವರ್ಧನ ತರಬೇತಿಯ ಮೂರನೇ ಹಂತದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಅಂಗನವಾಡಿ ಶಿಕ್ಷಕಿಯರು ಮಕ್ಕಳ ಬೌದ್ಧಿಕ ಗುಣಮಟ್ಟಕ್ಕಿಳಿದು ಮಕ್ಕಳೊಂದಿಗೆ ಮಕ್ಕಳಾಗಿ ಆಟ, ಪಾಠಗಳಲ್ಲಿ ಬೆರೆಯಬೇಕು. ಯಾವುದೇ ತಾರತಮ್ಯ ಮಾಡದೇ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಬೇಕೆಂದು ಕರೆ ನೀಡಿದರು.
ಪುರಸಭೆ ಅಧ್ಯಕ್ಷೆ ಗದ್ದೆಮ್ಮಾ ಭೋವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಿಡಿಪಿಒ ಶರಣಮ್ಮ, ಪುರಸಭೆ ಸದಸ್ಯ ಮೌಲಾಸಾಬ ಗೌಳಿ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಿ ಹಣಗಿ, ಎಸ್‌ಡಿಎಂಸಿ ಅದ್ಯಕ್ಷ ಮಹ್ಮದ್ ಹಾಜಿಬಾಬಾ ಕರಡಕಲ್ ಸೇರಿ ಇತರರು ಕಾರ್ಯಕ್ರಮದಲ್ಲಿ ಇದ್ದರು.

೨೦ಎಲ್‌ಎನ್‌ಜಿ-೧. ಕಾರ್ಯಕ್ರಮದ ಉದ್ಘಾಟನೆ.