ಶೋಷಿತರ ಏಳಿಗೆಗೆ ಬದುಕಿದವರು ಅಂಬೇಡ್ಕರ್-ಸೋಮಣ್ಣ

Vasati sachiva v. Somanna Ambedkar manava hakugala krantisene rajyadyaksha krantiraju. BBMP maaji sadasyarada umesh shetty, dasegowda

ಬೆಂಗಳೂರು.ಡಿ೬:ತಮ್ಮ ಜೀವನದುದ್ದಕ್ಕೂ ಅಸ್ಪೃಶ್ಯತೆ, ಜಾತಿ ಪದ್ಧತಿ, ಲಿಂಗಭೇದ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತರ ಏಳಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿ ಮಹಾಪರಿನಿರ್ವಾಣ ಹೊಂದಿದ ದಿನವಿದು ಎಂದು ಸಚಿವ ಸೋಮಣ್ಣ ತಿಳಿಸಿದರು.
ಗೋವಿಂದರಾಜ ನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ೬೫ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅವರು ತೋರಿಸಿ ಕೊಟ್ಟ ಹಾದಿಯಲ್ಲಿ ಅವರ ಯೋಚನೆ ಮತ್ತು ದೂರದೃಷ್ಟಿಯನ್ನು ಅರ್ಥಮಾಡಿಕೊಂಡು ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವದಡಿ ನವ ಸಮಾಜವನ್ನು ನಿರ್ಮಿಸುವ ಸಂಕಲ್ಪಕ್ಕೆ ನಾವೆಲ್ಲರೂ ಬದ್ಧರಾಗೋಣ. ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದಲ್ಲಿ ನಾನು ಸಮುದಾಯವೊಂದರ ಅಭಿವೃದ್ಧಿಯನ್ನು ಅಳೆಯುತ್ತೇನೆ ಎಂಬ ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬದ್ಧವಾಗಿವೆ. ಷಿತರ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ಹೊಂದಿದ ಈ ದಿನ ಪವಿತ್ರವಾದದ್ದು. ದೇಶಕ್ಕೆ ಇಂಥ ಚೇತನವನ್ನು ಕೊಡುಗೆ ನೀಡಿದ ಅಂಬೇಡ್ಕರ್ ಅವರ ಪೋಷಕರಿಗೆ ನನ್ನ ನಮನಗಳು ಎಂದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಉಮೇಶ್ ಶೆಟ್ಟಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ನಗರದ ಗೋವಿಂದರಾಜನಗರ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಇಂದು ನಡೆದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೬೫ನೇ ಪುಣ್ಯ ಸ್ಮರಣೆ ಪ್ರಯುಕ್ತ ಸಚಿವ ವಿ. ಸೋಮಣ್ಣನವರು ಮೇಣದ ಬತ್ತಿ ಹಚ್ಚಿ ನಮನ ಸಲ್ಲಿಸಿದರು. ಮಾನವ ಹಕ್ಕುಗಳ ಕ್ರಾಂತಿ ಸೇನೆ ಅಧ್ಯಕ್ಷ ಕ್ರಾಂತಿ ರಾಜು, ಮಾಜಿ ಪಾಲಿಕೆ ಸದಸ್ಯರಾದ ಉಮೇಶ್ ಶೆಟ್ಟಿ, ದಾಸೇಗೌಡ, ಮತ್ತಿತರರು ಇದ್ದಾರೆ.