
ಬೆಂಗಳೂರು,ಮೇ೧೬:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಆಸೆ ಎಂದು ಹೇಳಿದರು.
ಸಂಕಷ್ಟ ಸಂದರ್ಭದಲ್ಲಿ ಸೋನಿಯಾಗಾಂಧಿ ಅವರು ನಮ್ಮ ಮೇಲೆ ವಿಶ್ವಾಸ-ನಂಬಿಕೆ ಇಟ್ಟು ಜವಾಬ್ದಾರಿಯನ್ನು ನೀಡಿದರು. ಆ ಜವಾಬ್ದಾರಿಯನ್ನು ಡಿ.ಕೆ. ಶಿವಕುಮಾರ್‌ರವರು ಯಶಶ್ವಿಯಾಗಿ ನಿಭಾಯಿಸಿ, ಕಾಂಗ್ರೆಸ್ ರಾಜ್ಯದಲ್ಲಿ ೧೩೫ ಸ್ಥಾನಗಳನ್ನು ಗೆದ್ದುಕೊಟ್ಟಿದ್ದಾರೆ ಎಂದರು.
ಹಿಂದೆ, ಕಿರುಕುಳ, ಅವಮಾನ, ನಿಂದನೆಗಳನ್ನು ಸಹಿಸಿ, ಎಲ್ಲ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಈ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ. ಶಿವಕುಮಾರ್ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.