
ಕಲಬುರಗಿ,ಸೆ.07:ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಪಾಲನಾ ಕೇಂದ್ರದಲ್ಲಿ ಇಂದು ಪುಟಾಣಿಗಳ ಕಲರವ ಮನೆಮಾಡಿತ್ತು.
ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಪುಟಾಣಿಗಳು ಸಂಭ್ರಮಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸಾಕ್ಷಿಯಾದರು.
ಈ ಸಂದರ್ಭದಲ್ಲಿ ವಿವಿಧ ಸಂಸ್ಕøತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಉತ್ತಮ ಪ್ರದರ್ಶನ ಚಿಣ್ಣರಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ವಿತರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ ಯು., ಬಾಲ ವಿಕಾಸ ಯೋಜನಾಧಿಕಾರಿಗಳು ಹಾಗೂ ಶಿಶುಪಾಲನಾ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.