ಶ್ರೀಕ್ಷೇತ್ರ ಧರ್ಮಸ್ಥಳದಿಂದ 2 ಟನ್ ಆಕ್ಸಿಜನ್ ಹಸ್ತಾಂತರ

ಚಿತ್ರದುರ್ಗ,ಜೂ.8;
ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ  2 ಟನ್ ಪ್ರಾಣವಾಯು ಆಕ್ಸಿಜನ್‌ಅನ್ನು ಉಚಿತವಾಗಿ  ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
 ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ 2 ಟನ್ ಉಚಿತ ಪ್ರಾಣವಾಯು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಈಗಾಗಲೇ 10 ಆಕ್ಸಿಜನ್ ಕಾನ್ಸಂಟ್ರೇಟರ್ಸ್ಗಳನ್ನು ನೀಡಿದ್ದಾರೆ. ಇಂದು ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್‌ಅನ್ನು ನೀಡಲಾಗಿದ್ದು, ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸಿದರು.  
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ರೂಪಾಜನಾರ್ಧನ್, ನಾಗರಾಜ್ ಸಂಗಮ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರಿಸಲಾಯಿತು.