ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯವತಿಯಿಂದ ಶ್ರೀಸಿದ್ದಬವಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದರಕ್ಕಾಗಿ 3ಲಕ್ಷ ರೂ ದೇಣಿಗೆ

ಸಿರುಗುಪ್ಪ, ಏ.18: ತಾಲೂಕಿನ ಕೆ.ಸೂಗೂರು ಗ್ರಾಮದ ಶ್ರೀಸಿದ್ದಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯವತಿಯಿಂದ ಶ್ರೀಸಿದ್ದಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದರಕ್ಕಾಗಿ ಎರಡು ಲಕ್ಷ ರೂಪಾಯಿಗಳ ಚೆಕ್‍ನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿದೇರ್ಶಕ ಚಂದ್ರಶೇಖರ ಅವರು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಬಸವ ಮಹಾಸ್ವಾಮಿಗಳಿಗೆ ಹಸ್ತಾಂತರಿಸಿದರು.
ಇದೆ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತೆಕ್ಕಲಕೋಟೆ ವಲಯ ಮೇಲ್ವಿಚಾರಕಿ ಸವಿತಾ ಪಾಟೀಲ್ ಹಾಗೂ ಗ್ರಾಮಸ್ಥರು ಇದ್ದರು.