ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರ ಕಾರ್ಯ ಶ್ಲಾಘನೀಯ

ಕೆ.ಆರ್.ಪೇಟೆ. ಜೂ.05: ಸಮಾಜಮುಖಿ ಕೆಲಸಗಳಲ್ಲಿ ಅರ್ಪಣಾ ಮನೋಭಾವನೆಯಿಂದ ಕೆಲಸ ಮಾಡುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರ ಕಾರ್ಯ ಶ್ಲಾಘನೀಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಅವರು ಪಟ್ಟಣದ ಚನ್ನರಾಯಪಟ್ಟಣ ರಸ್ತೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಕಛೇರಿಯಲ್ಲಿ ಬಡ ಹಾಗೂ ನಿರ್ಗತಿಕ ಜನರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿ ಮತನಾಡಿದರು.
ಕೊರೋನಾ ಸಂಕಷ್ಟದ ಸಮಯದಲ್ಲಿಯೂ ಧರ್ಮಸ್ಥಳ ಸಂಸ್ಥೆಯವರು ತಾಲ್ಲೂಕಿನಲ್ಲಿ ಆಂಬುಲೆನ್ಸ್ ವಾಹನವನ್ನು ಬಿಟ್ಟು ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆತರುವ ಹಾಗೂ ಚಿಕಿತ್ಸೆ ಪಡೆದವರನ್ನು ಅವರ ಗ್ರಾಮಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಹಲವು ಕಡೆಗಳಲ್ಲಿ ರೈತರಿಗೆ ಉಚಿತವಾಗಿ ಕೃಷಿ ಪರಿಕರಗಳನ್ನು ಒದಗಿಸುವ ಮೂಲಕ ಕೃಷಿಗೆ ಉತ್ತೇಜನ ನೀಡಿ ರೈತರನ್ನು ಕಾಪಾಡುವ ಕೆಲಸ ಮಾಡುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಸೋಂಕಿತರಿಗೆ ಪ್ರಾಣವಾಯುವಾಗಿರುವ ಆಕ್ಸಿಜೆನ್ ಸೌಲಭ್ಯವನ್ನು ಕಲ್ಪಿಸಿ ನೂರಾರು ಜನರ ಪ್ರಾಣ ಉಳಿಸುವ ಕೆಲಸ ಮಾಡುತ್ತಿದೆ.
ಕೋವಿಡ್ ನಿಂದಾಗಿ ಜನರುಗಳು ಕೆಲಸವಿಲ್ಲದೇ ದುಡಿಮೆಇಲ್ಲದೇ ಮನೆಯಲ್ಲಿಯೇ ಇದ್ದು ಸಂಕಷ್ಟದ ಸಮಯವನ್ನು ಎದುರಿಸುತ್ತಿದ್ದಾರೆ. ಇದನ್ನು ಅರಿತು ತೀರಾ ಅವಶ್ಯಕವಾಗಿರುವ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ನೀಡಿ ಮಾನವೀಯತೆ ಮೆರೆಯುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮೂಡಾ ಅದ್ಯಕ್ಷ ಕೆ.ಶ್ರೀನಿವಾಸ್, ತಹಶೀಲ್ದಾರ್ ಎಂ.ಶಿವಮೂರ್ತಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ, ಉದ್ಯಮಿ ಕೆ.ಎಸ್.ರಾಜೇಶ್, ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ sಸಚಿವರ ಆಪ್ತ ಸಹಾಯಕರಾದ ದಯಾನಂದ್, ಕಿಕ್ಕೇರಿ ಕುಮಾರ್, ಅಂಗರಕ್ಷಕ ಪರಮೇಶ್ ಹಾಗೂ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.