ಶ್ರೀಗಂಧ ಮರಗಳ್ಳರ ಮೇಲೆ ಶೂಟೌಟ್ಪ ರಾರಿಯಾಗಿದ್ದ ಮತ್ತೊಬ್ಬ ಸೆರೆ

ಬೆಂಗಳೂರು, ಸೆ.8- ಬನ್ನೇರುಘಟ್ಟದಲ್ಲಿ ಶ್ರೀಗಂಧ ಮರಗಳ್ಳರ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಬನ್ನೇರುಘಟ್ಟ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಾಲೂರಿನ ನೆಟ್ಟೂರಹಳ್ಳಿಯ ಗೋಪಾಲ್(48) ಬಂಧಿತ ಆರೋಪಿಯಾಗಿದ್ದಾನೆ, ಕೋಲಾರ ಜಿಲ್ಲೆ ಶ್ರೀನಿವಾಸಪುರ ಬಳಿ ಗೋಪಾಲ್​ನನ್ನು ಪೊಲೀಸರು ಬಂಧಿಸಿದ್ದಾರೆ. 2018 ಮತ್ತು 2020ರಲ್ಲೂ ಗೋಪಾಲ್ ವಿರುದ್ಧ ಕೇಸ್ ದಾಖಲಾಗಿತ್ತು.ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಆರೋಪಿಯು ಸಹಚರ ತಿಮ್ಮರಾಯಪ್ಪ ಜೊತೆ ಕಲ್ಕೆರೆ ವಲಯಕ್ಕೆ ಗೋಪಾಲ್ ನುಗ್ಗಿದ್ದು, ಗಂಧದಮರ ಕಡಿಯುವ ವೇಳೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು​ ಶ್ರೀಗಂಧ ಮರಗಳ್ಳರನ್ನು ಶರಣಾಗುವಂತೆ ಸೂಚಿಸಿದ್ದಾರೆ. ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರೋಪಿ ಗೋಪಾಲ್ ಪರಾರಿಯಾಗಿದ್ದ.ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಏರಿಯಾದಲ್ಲಿ ಫಾರೆಸ್ಟ್​​ಗಾರ್ಡ್ ಹಾಗೂ ಇಬ್ಬರು ವಾಚರ್ಸ್ ಗಸ್ತಿನಲ್ಲಿದ್ದರು. ಈ ಜಾಗದಲ್ಲಿ ವನ್ಯ ಜೀವಿಗಳು ಹಾಗೂ ಶ್ರೀಗಂಧ ಮರಗಳು ಇರುವುದರಿಂದ ಕಳ್ಳರ ಹಾವಳಿ ಇದೆ. ಹೀಗಾಗಿ ಫಾರೆಸ್ಟ್ ವಾಚರ್ ಹಾಗೂ ಗಾರ್ಡ್ ನೈಟ್ ಪೆಟ್ರೋಲಿಂಗ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಮರ ಕಡಿಯುವ ಶಬ್ದ ಕೇಳಿಸಿದೆ. ಸ್ಥಳಕ್ಕೆ ಹೋಗಿ ನೋಡುತ್ತಿದ್ದಂತೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಕಳ್ಳ ಮುಂದಾಗಿದ್ದಾನೆ. ಶರಣಾಗುವಂತೆ ಎಚ್ಚರಿಕೆ ನೀಡಿದರೂ, ಕೇಳದೆ ಇದ್ದಾಗ ಗುಂಡು ಹಾರಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದರು.