ಶ್ರೀಗಳ 114ನೇ ಜಯಂತಿ ಆಚರಣೆ

ತುಮಕೂರು, ಏ. ೩- ಸಮಾಜದ ಕೆಳಸ್ತರಗಳಿಂದ ಬಂದ ಆಶಕ್ತರು, ದೀನರು, ದುರ್ಬಲರಿಗೆ ತ್ರಿವಿಧ ದಾಸೋಹಿಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ಅನ್ನ, ಆಶ್ರಯ ಮತ್ತು ವಿದ್ಯೆ ನೀಡಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಸೇವೆಯನ್ನು ನಿರಂತರವಾಗಿ ಮಾಡಿದ್ದಾರೆ. ಸ್ವಾಮೀಜಿಗಳು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ತರ ಕಾರ್ಯಗಳಿಂದ ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಅಗಣಿತ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಂ.ಆರ್. ಹುಲಿನಾಯ್ಕರ್ ಹೇಳಿದರು.
ನಗರದ ಶ್ರೀದೇವಿ ಶಿಕ್ಷಣ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೪ನೇ ಜನ್ಮ ದಿನೋತ್ಸವದ ಭಕ್ತಿ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ. ರಮಣ್ ಆರ್. ಹುಲಿನಾಯ್ಕರ್ ಮಾತನಾಡಿ, ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ನೂರಾರು ಕಾರ್ಯಗಳಲ್ಲಿ ನಾವು ಒಂದೆರಡೂ ಅಂಶಗಳನ್ನೂ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್. ಪಾಟೀಲ್ ಮಾತನಾಡಿ, ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನ್ನ ದಾಸೋಹ ನಡೆಸುವುದು ನಿಜಕ್ಕೂ ಶಾಘ್ಲನೀಯ ಕಾರ್ಯ ಎಂದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಬಲರಾಜು, ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್, ಆಡಳಿತಾಧಿಕಾರಿ ಬ್ರಹ್ಮದೇವಯ್ಯ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.