ಶ್ರೀನಿಧಿ ಕಲಬುರಗಿ ಹೆಚ್ಚುವರಿ ಎಸ್ಪಿ

ಕಲಬುರಗಿ:ನ.22: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಯ ಎನ್.ಶ್ರೀನಿಧಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಎಎಸ್ಪಿ
ಪ್ರಸನ್ನ ದೇಸಾಯಿ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಶ್ರೀನಿಧಿ ಇಂದಿಲ್ಲಿ ಪದಭಾರ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ಗುಪ್ತವಾರ್ತೆ ವಿಭಾಗದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿಧಿ ಅವರನ್ನು ಇತ್ತೀಚೆಗೆ ರಾಜ್ಯ ಸರಕಾರ ಕಲಬುರಗಿ ಜಿಲ್ಲೆಗೆ ವರ್ಗಾವಣೆಗೊಳಿಸಿತ್ತು. ಈ ಮಧ್ಯೆ ಪ್ರಸನ್ನ ದೇಸಾಯಿ ಅವರಿಗೆ ಇನ್ನೂ ಯಾವುದೇ ಹುದ್ದೆ ತೋರಿಸಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮೂಲಗಳು ತಿಳಿಸಿವೆ.