ಶ್ರೀರಾಮ ಸೇನೆವತಿಯಿಂದ ಗೋರಕ್ಷಣೆ


ಸಂಜೆವಾಣಿ ವಾರ್ತೆ
ಹೊಸಪೇಟೆ ಜ4: ಶ್ರೀರಾಮ ಸೇನೆಯ ಕಾರ್ಯಕರ್ತರು, 16 ಆಕಳು ಕರುಗಳನ್ನು ರಕ್ಷಿಸಿ ಗೋಶಾಲೆಗೆ ರವಾನಿಸಿದ ಘಟನೆ ವಿಜಯನಗರ ಜಿಲ್ಲೆಯ ತಾಲ್ಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದ್ದು, ಹೊಸಪೇಟೆಯ ಕಾಸಾಯಿ ಖಾನೆಗೆ ಟಾಟಾ ಏಸ್‍ನಲ್ಲಿ ಕೊಂಡೊಯ್ಯುತ್ತಿದ್ದಾಗ ಮರಿಯಮ್ಮನಹಳ್ಳಿ ಶ್ರೀರಾಮ ಸೇನೆ ಯುವಕರು ತಡೆದು ನಿಲ್ಲಿಸಿ ಗೋವುಗಳ ರಕ್ಷಣೆ ಮಾಡಿದ್ದಾರೆ. ಗಂಡು ಕರುಗಳು ಎನ್ನುವ ಕಾರಣಕ್ಕಾಗಿ ಕಾಸಾಯಿ ಖಾನೆಗೆ ರವಾನೆ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮರಿಯಮ್ಮನ ಹಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವುಗಳನ್ನು ಸಾಗಿಸುತ್ತಿದ್ದ ಸಂತೋಷ ಹಾಗೂ ಈಶಪ್ಪ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.